ನವದೆಹಲಿ: ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ವಿಕಾಸ್ ಮೋರ್ಚಾ (ಜೆವಿಎಂ-ಪಿ) ಅಧ್ಯಕ್ಷ ಬಾಬುಲಾಲ್ ಮರಂಡಿ ಅವರು ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ. ರಾಂಚಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ವಿಲೀನ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಪಕ್ಷದ ಕಾರ್ಯಕಾರಿ ಮಂಡಳಿ ಸರ್ವಾನುಮತದಿಂದ ನಿರ್ಧರಿಸಿದೆ. ಇದು ರಾಜ್ಯದ ಹಿತದೃಷ್ಟಿಯಿಂದ ನಡೆಯಲಿದೆ ಮರಾಂಡಿ ಅವರು ಜೆವಿಎಂ-ಪಿ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಘೋಷಣೆ ಮಾಡಿದ ಸಂದರ್ಭದಲ್ಲಿ ಹೇಳಿದ್ದಾರೆ.
ಫೆಬ್ರವರಿ 17 ರಂದು ರಾಂಚಿಯ ಪ್ರಭಾತ್ ತಾರಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಔಪಚಾರಿಕ ವಿಲೀನ ನಡೆಯಲಿದೆ. ವಿಲೀನ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಜೆವಿಎಂ-ಪಿ ಕಾರ್ಯಕಾರಿ ಸಮಿತಿ ಸಭೆ ರಾಂಚಿಯಲ್ಲಿ ನಡೆಯಿತು. ಮರಾಂಡಿ ವಿಲೀನದ ಪ್ರಸ್ತಾಪವನ್ನು ಮಂಡಿಸಿದರು, ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ವಿಲೀನದ ನಂತರ ಮರಾಂಡಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ, ಏಕೆಂದರೆ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಇದುವರೆಗೆ ಆಯ್ಕೆ ಮಾಡಿಲ್ಲ, ಮರಂಡಿಗಾಗಿ ಈ ಹುದ್ದೆ ಖಾಲಿ ಇದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.