ನವದೆಹಲಿ: 400 ಕೋಟಿ ರೂಪಾಯಿಗಳ ಹವಾಲಾ ವಹಿವಾಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆಪ್ತ ಎಂದೇ ಪರಿಗಣಿಸಲ್ಪಟ್ಟಿರುವ ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಅವರಿಗೆ ಆದಾಯ ತೆರಿಗೆ ಇಲಾಖೆ ಸಮನ್ಸ್ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 11 ರಂದು ಸಮನ್ಸ್ ಜಾರಿಗೊಳಿಸಲಾಗಿದ್ದು, ಫೆಬ್ರವರಿ 14 ರಂದು ಪಟೇಲ್ ಅವರು ಆದಾಯ ತೆರಿಗೆ ಇಲಾಖೆಗೆ ಹಾಜರಾಗಲು ನಿರ್ಧರಿಸಲಾಗಿತ್ತು. ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಅವರು ಹಾಜರಾಗಲು ವಿಫಲರಾಗಿದ್ದಾರೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಉಸಿರಾಟದ ತೊಂದರೆಯಿಂದಾಗಿ ಪಟೇಲ್ ಅವರನ್ನು ಫರಿದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೀಘ್ರದಲ್ಲೇ ಪಟೇಲ್ ವಿರುದ್ಧ ಹೊಸ ಸಮನ್ಸ್ ಜಾರಿಗೊಳಿಸುವ ನಿರೀಕ್ಷೆಯಿದೆ.
ಈ ಹಿಂದೆ ಪಟೇಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ವು ಸ್ಟಾರ್ಲಿಂಗ್ ಬಯೋಟೆಕ್ ವಿರುದ್ಧದ ಮನಿ ಲಾಂಡರಿಂಗ್ ಆರೋಪವನ್ನು ಒಳಗೊಂಡ 5,700 ಕೋಟಿ ರೂ.ಗಳ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತ್ತು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.