ಬೆಳ್ತಂಗಡಿ: ಆರ್ಸೆಟಿಗಳಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದೆಲ್ಲೆಡೆ ಕೌಶಲಾಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಆರ್ಸೆಟಿಗಳು (ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳು) ಕೂಡಾ ನಿರುದ್ಯೋಗಿಗಳಿಗೆ ಸಕಾಲಿಕ ತರಬೇತಿ, ಮಾರ್ಗದರ್ಶನ ಮತ್ತು ಪ್ರೇರಣೆಯೊಂದಿಗೆ ಕೌಶಲಾಭಿವೃದ್ಧಿಗೆ ಪ್ರೋತ್ಸಾಹ ನೀಡುತ್ತಿದೆ. ಪ್ರಧಾನಿಯವರ ಕನಸು ನನಸಾಗುತ್ತಿದೆ. ಈ ದಿಸೆಯಲ್ಲಿ ಪ್ರಾಯೋಜಕತ್ವ ವಹಿಸಿದ ಬ್ಯಾಂಕ್ಗಳು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಕಾರ ಶ್ಲಾಘನೀಯವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಜು.15ರಂದು ದೆಹಲಿಯಲ್ಲಿ ಉನ್ನತ ಸಾಧನೆ ಮಾಡಿದ ಆರ್ಸೆಟಿ ಫಲಾನುಭವಿಗಳ ರಾಷ್ಟ್ರೀಯ ಸಮಾವೇಶ ಮತ್ತು ಮೂರನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಆರ್ಸೆಟಿಗಳು ಕ್ರಾಂತಿಕಾರಿ ಪಾತ್ರ ವಹಿಸಿವೆ. ಈ ದಿಸೆಯ್ಲಲಿ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಕಾರ ಮತ್ತು ಪ್ರೋತ್ಸಾಹವನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು.
ಆರ್ಸೆಟಿಯ ರಾಷ್ಟ್ರೀಯ ಅಕಾಡೆಮಿ ವಿಸ್ತರಣೆ, ತರಬೇತಿ ಪಡೆದ ನಿರುದ್ಯೋಗಿಗಳಿಗೆ ತಕ್ಷಣ ಮುಕ್ತವಾಗಿ ಸಾಲ ನೀಡುವಿಕೆ. ಉತ್ತಮ ಸಾಧನೆ ಮಾಡಿದ ಆರ್ಸೆಟಿಗಳನ್ನು ಗುರತಿಸಿ ಪ್ರೋತ್ಸಾಹಿಸುವುದು, ಪ್ರಾಯೋಜಕತ್ವ ವಹಿಸಿದ ಬ್ಯಾಂಕ್ಗಳಿಂದ ಆರ್ಸೆಟಿ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಸಲಹೆ ನೀಡಿದ ಅವರು ಎಲ್ಲರೂ ನಿಷ್ಠೆಯಿಂದ, ಬದ್ಧತೆಯಿಂದ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸಹಕರಿಸಬೇಕು ಎಂದರು.
ಇದೇ ಸಂಂದರ್ಭ ಆರ್ಸೆಟಿಗಳ ವಾರ್ಷಿಕ ವರದಿಯನ್ನು ಡಾ| ಹೆಗ್ಗಡೆಯವರು ಬಿಡುಗಡೆಗೊಳಿಸಿದರು.
ಸಿಂಡಿಕೇಟ್ ಬ್ಯಾಂಕ್ನ ಆಡಳಿತ ನಿರ್ದೇಶಕ ಅರುಣ ಶ್ರೀವಾಸ್ತವ, ಕೆನರಾ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್. ರಾವತ್ ಮಾತನಾಡಿ ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಹೆಗ್ಗಡೆಯವರ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು.
ಕೇಂದ್ರ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜೆ.ಕೆ. ಮೋಹಪಾತ್ರ, ಜೊತೆ ಕಾರ್ಯದರ್ಶಿ ಅಪರಾಜಿತ ಸಾರಂಗಿ, ರೇಣುಕಾ ಕುಮಾರ್ ಮತ್ತು ಆರ್ಸೆಟಿಯ ಮುಖ್ಯ ಯೋಜನಾ ಸಂಯೋಜಕ ಕೆ.ಎನ್. ಜನಾರ್ದನ್ ಉಪಸ್ಥಿತರಿದ್ದರು.
ಪೊಟೊ: ಹೆಗ್ಗಡೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.