ನವದೆಹಲಿ: ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ಮತ್ತು ವಿವಿಧ ಕೇಂದ್ರ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಕೇಂದ್ರ ಸಚಿವರುಗಳ ಎರಡನೇ ಬ್ಯಾಚ್ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳುತ್ತಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಕಳೆದ ವರ್ಷ ಆಗಸ್ಟ್ 5 ರಂದು 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಮೋದಿ ಸರ್ಕಾರದ ಮೊದಲ ಪ್ರಮುಖ ಸಂರ್ಪಕ ಕಾರ್ಯಕ್ರಮದ ಭಾಗವಾಗಿ ಜನವರಿಯಲ್ಲಿ ಕೇಂದ್ರ ಸಚಿವರ ಮೊದಲ ಬ್ಯಾಚ್ ಕಣಿವೆ ರಾಜ್ಯಕ್ಕೆ ಭೇಟಿ ನೀಡಿತ್ತು. ಸಚಿವರು ಹಲವಾರು ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಅಲ್ಲಿನ ಜನರ ಪ್ರತಿಕ್ರಿಯೆಗಳನ್ನು ಸಂಗ್ರಹಿಸಿದರು.
ಮೂಲಗಳ ಪ್ರಕಾರ, ಏಪ್ರಿಲ್ 3 ರಂದು ಸಂಸತ್ ಅಧಿವೇಶನ ಮುಗಿದ ನಂತರ ಕೇಂದ್ರ ಮಂತ್ರಿಗಳ ಎರಡನೇ ಬ್ಯಾಚ್ ಕಣಿವೆ ರಾಜ್ಯಕ್ಕೆ ಭೇಟಿಯನ್ನು ನೀಡಲಿದೆ.
ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುವ ಸಚಿವರುಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿವಿಧ ಸಚಿವರು ಅಲ್ಲಿನ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ನಡೆಸಲಿದ್ದಾರೆ.
ಜನವರಿಯಲ್ಲಿ, 36 ಕೇಂದ್ರ ಸಚಿವರುಗಳ ಮೊದಲ ಬ್ಯಾಚ್ ಕಾಶ್ಮೀರದ ಎಂಟು ಸ್ಥಳಗಳಿಗೆ ಮತ್ತು ಜಮ್ಮುವಿನ 52 ಸ್ಥಳಗಳಿಗೆ ಭೇಟಿ ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.