ಮಂಗಳೂರು : ಸತತ ಪರಿಶ್ರಮದಿಂದ ಜೀವನದಲ್ಲಿ ಉನ್ನತಿಯನ್ನು ಸಾಧಿಸಬಹುದು, ಕಾಲೇಜಿನ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಜಾಗತಿಕ ಸಮುದಾಯದ ಅಗತ್ಯತೆಗಳನ್ನು ತಿಳಿದುಕೊಳ್ಳಲು ಸಾಧ್ಯ.
ಉತ್ತಮ ಸಂವಹನ ಹಾಗೂ ವ್ಯಕ್ತಿತ್ವ ವಿಕಸನಕ್ಕಾಗಿ ವಿದ್ಯಾರ್ಥಿಗಳು ಕಾಲೇಜಿನ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಹಾಗೂ ಭವಿಷ್ಯದ ಸವಾಲುಗಳನ್ನು ಎದುರಿಸುವ ಮನೋಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಅರುಣಾಂಜಲಿ ಸೆಕ್ಯೂರಿಟೀಸ್ನ ನಿರ್ದೆಶಕರಾದ ಡಾ.ನೋರ್ಬಟ್ ಶೈಣೈ ಕರೆನೀಡಿದರು. ಅವರು ಬೆಸೆಂಟ್ ಮಹಿಳಾ ಕಾಲೇಜಿನ ಈ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ನೆರವೇರಿಸುತ್ತಾ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ.ಸುಧಾ ಕೆ ವಿದ್ಯಾರ್ಥಿಗಳು ಶಿಸ್ತು, ಸಮಯ ಪ್ರಜ್ಞೆ ಹಾಗೂ ಧನಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಹಲವಾರು ಅವಕಾಶಗಳು ಸೃಷ್ಟಿಸುತ್ತದೆ. ಅವುಗಳನ್ನು ಬಳಸಿಕೊಂಡು ಮುಂದಿನ ಬದುಕಿಗೆ ವಿದ್ಯಾರ್ಥಿಗಳು ತಯಾರಾಗಬೇಕೆಂದು ತಿಳಿಸಿದರು
ಅವರು ಹೊಸದಾಗಿ ಚುನಾಯಿತರಾದ ವಿದ್ಯಾರ್ಥಿ ಮುಖಂಡರು ಹಾಗೂ ವಿವಿಧ ಸಂಘಗಳ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಪ್ರೀತಮ ಅಧ್ಯಕ್ಷೆಯಾಗಿ, ಸಹನಾ ಉಪಾಧ್ಯಕ್ಷೆಯಾಗಿ, ಲಕ್ಷ್ಮೀ ಕಾರ್ಯದರ್ಶಿಯಾಗಿ, ಅಂಜನಾ. ಟಿ.ವಿ. ಉಪಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕಾಲೇಜಿನ ಸಂಚಾಲಕರಾದ ದೇವಾನಂದ ಪೈ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಇಂದಿರಾ ದೇವಿ, ಸಂಸ್ಕೃತ ವಿಭಾಗದ ಮುಖ್ಯಸ್ಥೆ ಪ್ರೊ. ಕೀರ್ತಿ ದೇವಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಪ್ರವೀಣ್ ಕುಮಾರ್ ಕೆ.ಸಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಶುಭ ಹಾರೈಸಿದರು. ದೀಪ್ತಿ ಎಂ ಕುಟಿನ್ಹಾ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಲಲಿತ ಕಲಾ ಸಂಘದ ವಿದ್ಯಾರ್ಥಿನಿಯರು ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.