ಸುಳ್ಯ : ಸುಳ್ಯ ಸಮೀಪದ ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಅಂಗವಾಗಿ ನಡೆದ ಶ್ರೀಭಗವತಿ ದೊಡ್ಡಮುಡಿ ನೋಡಲು ಜನ ಸಾಗರವೇ ನೆರೆದಿತ್ತು.
ಸುಮಾರು 30 ಅಡಿಗಳಿಗಿಂತಲೂ ಎತ್ತರದ ವೈವಿಧ್ಯಮಯ ಅಲಂಕಾರಗಳಿಂದ ಕೂಡಿದ ಭಗವತಿಯ ಮುಡಿ ಇಲ್ಲಿನ ವಿಶೇಷತೆ.
30 ಅಡಿ ಎತ್ತರದ ತೆಳ್ಳಗೆ ಸಿಗಿದ ಬಿದಿರಿನ ಸಲಾಕೆಗಳಿಂದ ಗೋಪುರಾಕಾರ ನಿರ್ಮಿಸಿ, ಅದಕ್ಕೆ ಬಣ್ಣ ಬಣ್ಣದ ಸೀರೆಗಳಿಂದ ಸುತ್ತಿ ಸಿಂಗರಿಸಿದ ಭಗವತಿಯ ಮುಡಿಯ ವೈಭವ ಭಕ್ತರನ್ನು ಸೆಳೆಯುತ್ತದೆ. ಭಗವತಿ ದೇವಿಗೆ ಕಂಕಣ ಭಾಗ್ಯ, ಸಂತಾನ ಭಾಗ್ಯ ಹಾಗೂ ಇತರ ಕಾರ್ಯಗಳಿಗೆ ಹರಕೆ ಹೊತ್ತ ಭಕ್ತರು ತಮ್ಮ ಹರಕೆಯ ರೂಪದಲ್ಲಿ ಸೀರೆ, ಚಿನ್ನ, ಬೆಳ್ಳಿಗಳನ್ನು ಅರ್ಪಿಸಿ ಪ್ರಸಾದ ಸ್ವೀಕರಿಸಿದರು.
ಕರ್ನಾಟಕ ಮತ್ತು ಕೇರಳದ ರಾಜ್ಯಗಳಿಂದ ಆಗಮಿಸಿದ ಭಕ್ತರು ದೊಡ್ಡ ಮುಡಿಯನ್ನು ಕಣ್ತುಂಬಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.