ಲಕ್ನೋ : ಆರ್ಎಸ್ಎಸ್ನ ಶೈಕ್ಷಣಿಕ ಅಂಗ ವಿದ್ಯಾಭಾರತಿಯಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯ ವಿದ್ಯಾರ್ಥಿಗಳ ಸಂಖ್ಯೆ ಮಹತ್ವದ ಏರಿಕೆಯನ್ನು ಕಂಡಿದೆ. ಉತ್ತರಪ್ರದೇಶದ ವಿದ್ಯಾಭಾರತಿ ಶಾಲೆಗಳಲ್ಲೇ ಮಹತ್ವದ ಏರಿಕೆ ದಾಖಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಸರಿಸುಮಾರು ಶೇ. 30 ರಷ್ಟು ಮುಸ್ಲಿಂ, ಕ್ರಿಶ್ಚಿಯನ್ ವಿದ್ಯಾರ್ಥಿಗಳ ಏರಿಕೆಯನ್ನು ಗುರುತಿಸಲಾಗಿದೆ. ವರದಿಯ ಪ್ರಕಾರ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸುಮಾರು 12000 ವಿದ್ಯಾರ್ಥಿಗಳು ಆರ್ಎಸ್ಎಸ್ ಶಾಲೆಗಳಲ್ಲಿ ಓದುತ್ತಿದ್ದಾರೆ. ವಿದ್ಯಾಭಾರತಿ ಶಾಲೆಗಳಲ್ಲಿ ಮುಸ್ಲಿಂ ಶಿಕ್ಷಕರು ಮತ್ತು ಸಿಬ್ಬಂದಿಗಳನ್ನು ಕೂಡ ನೇಮಿಸಲಾಗಿದೆ.
ಧಾರ್ಮಿಕ ರೂಢಿಗಳನ್ನು ಮೀರಿ ಇಲ್ಲಿನ ಮುಸ್ಲಿಂ ವಿದ್ಯಾರ್ಥಿಗಳು ಶಾಲೆಯ ಪ್ರಾರ್ಥನೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಮತ್ತು ಅಧ್ಯಯನಗಳಲ್ಲಿ ಅತ್ಯುತ್ತಮವಾದ ಸಾಧನೆಗಳನ್ನು ಮಾಡುತ್ತಿದ್ದಾರೆ.
ಪೂರ್ವ ಉತ್ತರ ಪ್ರದೇಶದ ವಿದ್ಯಾಭಾರತಿಯ ಹೆಚ್ಚುವರಿ ಕಾರ್ಯದರ್ಶಿ ಚಿಂತಾಮಣಿ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಯುಪಿಯಲ್ಲಿರುವ ನಮ್ಮ ಶಾಲೆಗಳಲ್ಲಿ 12000 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಓದುತ್ತಿದ್ದಾರೆ. ಪೂರ್ವ ಯುಪಿಯ 1194 ಶಾಲೆಗಳಲ್ಲಿ ಸುಮಾರು 9037 ಮುಸ್ಲಿಮರು ಮತ್ತು 10 ಕ್ರೈಸ್ತ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ. ಉಳಿದವರು ಪಶ್ಚಿಮ ಯುಪಿಯಲ್ಲಿದ್ದಾರೆ” ಎಂದಿದ್ದಾರೆ.
2016 ರಲ್ಲಿ, ಪೂರ್ವ ಯುಪಿಯ ಅವಧ್, ಕಾನ್ಪುರ್, ಕಾಶಿ, ಮತ್ತು ಗೋರಖ್ಪುರ ಸೇರಿದಂತೆ 49 ಜಿಲ್ಲೆಗಳ ಶಾಲೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆ 6890 ಆಗಿದ್ದು, ಇದು 2019 ರಲ್ಲಿ 9037ಕ್ಕೆ ಹೆಚ್ಚಾಗಿದೆ. ಉತ್ತಮ ಮತ್ತು ಗುಣಮಟ್ಟದ ಶಿಕ್ಷಣದ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಸಿಂಗ್ ಹೇಳಿದರು.
ಯುಪಿಯ ವಿದ್ಯಾಭಾರತಿ ಶಾಲೆಗಳಲ್ಲಿ ಸುಮಾರು ಆರು ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.