ಶ್ರೀನಗರ: ಜಮ್ಮು-ಕಾಶ್ಮೀರದ ಬಾರಮುಲ್ಲಾದ ಟಪ್ಪರ್ ಪಠಾಣ್ನಲ್ಲಿ ಶನಿವಾರ ಭದ್ರತಾ ಪಡೆಗಳು ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಬಂಧನಕ್ಕೊಳಪಡಿಸಿವೆ. ಬಂಧಿತ ಉಗ್ರನನ್ನು ಜುನೈದ್ ಫಾರೂಖ್ ಪಂಡಿತ್ ಎಂದು ಗುರುತಿಸಲಾಗಿದೆ. ನಿನ್ನೆಯಷ್ಟೇ ನವೀದ್ ಅಹ್ಮದ್ ಭಟ್ ಮತ್ತು ಅಖೀಬ್ ಯಾಸಿನ್ ಭಟ್ ಎಂಬ ಉಗ್ರರನ್ನು ಹತ್ಯೆ ಮಾಡಿವೆ.
2020ರ ಬಳಿಕ ಇದುವರೆಗೆ 13 ಯಶಸ್ವಿ ಕಾರ್ಯಾಚರಣೆಗಳನ್ನು ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ್ದು, ಇದರಲ್ಲಿ 25 ಉಗ್ರರ ಹತ್ಯೆಯಾಗಿದೆ. ಕಾಶ್ಮೀರದಲ್ಲಿ 9 ಉಗ್ರರನ್ನು ಮತ್ತು ಜಮ್ಮುವಿನಲ್ಲಿ 3-4 ಉಗ್ರರನ್ನು ಬಂಧಿಸಲಾಗಿದೆ. ಸುಮಾರು 40 ಮಂದಿ ಉಗ್ರರಿಗೆ ಸಹಾಯ ಮಾಡುತ್ತಿದ್ದವರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ಬಂಧಿತ ಉಗ್ರ ಜುನೈದ್ ಫಾರೂಖ್ ಪಂಡಿತ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಜೊತೆ ಸಂಪರ್ಕವನ್ನು ಹೊಂದಿದ್ದ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.