ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಭಾರತಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಭಾರತ ನಿಮ್ಮ ಆಗಮನಕ್ಕಾಗಿ ಕಾಯುತ್ತಿದೆ. ಅಹಮದಾಬಾದಿನಲ್ಲಿ ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇವೆ” ಎಂದಿದ್ದಾರೆ.
ನಿನ್ನೆ ಅಮೆರಿಕದಿಂದ ಭಾರತಕ್ಕೆ ಹೊರಟ ವೇಳೆಯಲ್ಲಿ ಟ್ರಂಪ್ ಅವರು ಟ್ವೀಟ್ ಮಾಡಿ, “ಮೆಲಾನಿಯಾ ಜೊತೆ ಭಾರತಕ್ಕೆ ಹೊರಟಿದ್ದೇನೆ” ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಾಗಿ ಮೋದಿ, ನಿಮ್ಮ ಆಗಮನಕ್ಕಾಗಿ ಭಾರತ ಕಾಯುತ್ತಿದೆ” ಎಂದಿದ್ದಾರೆ.
India awaits your arrival @POTUS @realDonaldTrump!
Your visit is definitely going to further strengthen the friendship between our nations.
See you very soon in Ahmedabad. https://t.co/dNPInPg03i
— Narendra Modi (@narendramodi) February 24, 2020
ತಮ್ಮ ಮೊದಲ ಭಾರತ ಭೇಟಿಯಲ್ಲಿ ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ಮೋದಿಯವರ ತವರು ರಾಜ್ಯ ಗುಜರಾತ್ನ ಅತಿದೊಡ್ಡ ನಗರವಾದ ಅಹಮದಾಬಾದಿಗೆ ಬಂದಿಳಿಯಲಿದ್ದಾರೆ. “ನಿಮ್ಮ ಭೇಟಿ ಖಂಡಿತವಾಗಿಯೂ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಅಧ್ಯಕ್ಷ ಟ್ರಂಪ್ ಅವರು ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್, ಪುತ್ರಿ ಇವಾಂಕಾ ಮತ್ತು ಆಕೆಯ ಪತಿ ಜೇರೆಡ್ ಕುಶ್ನರ್ ಅವರೊಂದಿಗೆ ಮಧ್ಯಾಹ್ನಕ್ಕೂ ಸ್ವಲ್ಪ ಮೊದಲು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಲಿದ್ದಾರೆ.
ವಿಶ್ವದ ಅತಿ ದೊಡ್ಡ ಸರ್ದಾರ್ ವಲ್ಲಭಭಾಯಿ ಪಟೇಲ್ ಕ್ರಿಕೆಟ್ ಕ್ರೀಡಾಂಗಣಕ್ಕೆ ವಿಮಾನನಿಲ್ದಾಣದಿಂದ ಟ್ರಂಪ್ ಮತ್ತು ಮೋದಿ ರೋಡ್ ಶೋ ಮೂಲಕ ತೆರಳಲಿದ್ದಾರೆ. ಲಕ್ಷಾಂತರ ಜನ ಅವರಿಗೆ ಸ್ವಾಗತ ಕೋರುವ ನಿರೀಕ್ಷೆ ಇದೆ. ಕ್ರೀಡಾಂಗಣದಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಅವರು “ನಮಸ್ತೆ, ಟ್ರಂಪ್” ಮೆಗಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.