ನವದೆಹಲಿ: ಭಾರತಕ್ಕೆ ಆಗಮಿಸುತ್ತಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಭಾರತಕ್ಕೆ ಆಗಮಿಸುವ ದಾರಿ ಮಧ್ಯೆದಲ್ಲಿ ಅವರು, ನಾವು ಭಾರತಕ್ಕೆ ಆಗಮಿಸುವ ಮಾರ್ಗ ಮಧ್ಯೆಯಿದ್ದೇವೆ ಎಂದು ಟ್ವಿಟ್ ಮಾಡಿದ್ದಾರೆ.
“ನಾವು ಭಾರತಕ್ಕೆ ಆಗಮಿಸುವ ತಯಾರಿಯಲ್ಲಿದ್ದೇವೆ. ಮಾರ್ಗ ಮಧ್ಯದಲ್ಲಿ ಇದ್ದೇವೆ, ಕೆಲವೇ ಗಂಟೆಗಳಲ್ಲಿ ನಿಮ್ಮೆಲ್ಲರನ್ನು ಭೇಟಿಯಾಗಲಿದ್ದೇವೆ” ಎಂದು ಅವರು ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.
हम भारत आने के लिए तत्पर हैं । हम रास्ते में हैँ, कुछ ही घंटों में हम सबसे मिलेंगे!
— Donald J. Trump (@realDonaldTrump) February 24, 2020
ಟ್ರಂಪ್ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ‘ಅತಿಥಿ ದೇವೋ ಭವ’ ಎಂದು ಟ್ವೀಟ್ ಮಾಡಿದ್ದಾರೆ.
अतिथि देवो भव: https://t.co/mpccRkEJCE
— Narendra Modi (@narendramodi) February 24, 2020
ಪತ್ನಿ ಮೆಲಾನಿಯ ಟ್ರಂಪ್ ಮತ್ತು ಉನ್ನತ ಮಟ್ಟದ ನಿಯೋಗದೊಂದಿಗೆ ಭಾರತಕ್ಕೆ ಆಗಮಿಸುತ್ತಿರುವ ಟ್ರಂಪ್ ಇಂದು ಮತ್ತು ನಾಳೆ ಭಾರತದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅಹ್ಮದಾಬಾದಿಗೆ ಮೊದಲು ಆಗಮಿಸುವ ಅವರು ‘ನಮಸ್ತೆ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ, ಬಳಿಕ ದೆಹಲಿಗೆ ತೆರಳಿ ಆಗ್ರಾದ ತಾಜ್ ಮಹಲ್ಗೆ ಭೇಟಿ ನೀಡಲಿದ್ದಾರೆ.
ಫೆ. 25 ರಂದು ಟ್ರಂಪ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ಸಿಗಲಿದೆ. ಮಹಾತ್ಮ ಗಾಂಧಿ ಸಮಾಧಿ ಸ್ಥಳ ರಾಜಘಾಟ್ಗೆ ತೆರಳಿ ಗೌರವಾರ್ಪಣೆ ಮಾಡಲಿದ್ದಾರೆ. ಬಳಿಕ ಹೈದರಾಬಾದ್ ಹೌಸ್ನಲ್ಲಿ ಮೋದಿ ಮತ್ತು ಟ್ರಂಪ್ ನಡುವೆ ನಿಯೋಗ ಮಟ್ಟದ ಮಾತುಕತೆ ನಡೆಯಲಿದೆ. ಬಳಿಕ ಮೋದಿ ಟ್ರಂಪ್ ಅವರಿಗೆ ಔತಣಕೂಟ ಏರ್ಪಡಿಸಲಿದ್ದಾರೆ.
ಬಳಿಕ ಟ್ರಂಪ್ ಅಮೆರಿಕಾ ರಾಯಭಾರ ಕಛೇರಿಯಲ್ಲಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಲ್ಲಿ ಕೈಗಾರಿಕೋದ್ಯಮಿಗಳ ಜೊತೆ ರೌಂಡ್ ಟೇಬಲ್ ಸಭೆ ನಡೆಸಲಿದ್ದಾರೆ. ಸಂಜೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಲಿರುವ ಟ್ರಂಪ್ ನಂತರ ಅಮೆರಿಕಾಗೆ ವಾಪಾಸ್ಸಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.