ನವದೆಹಲಿ: ಸಿಗರೇಟು ಸೇದುವ ಕಾನೂನುಬದ್ಧ ವಯಸ್ಸನ್ನು ಪ್ರಸ್ತುತ 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸಲು ಕೇಂದ್ರ ಆರೋಗ್ಯ ಸಚಿವಾಲಯ ಯೋಜಿಸಿದೆ. 21 ವರ್ಷ ವಯಸ್ಸು ದಾಟಿದವರಿಗೆ ಮಾತ್ರ ಧೂಮಪಾನ ಮಾಡಲು ಅವಕಾಶ ನೀಡಬೇಕೆಂದು ಸಚಿವಾಲಯ ಪ್ರಸ್ತಾಪಿಸಿದೆ. ಪ್ರಸ್ತುತ, 18 ವರ್ಷಕ್ಕಿಂತ ಮೇಲ್ಪಟ್ಟ ಜನರು ದೇಶದಲ್ಲಿ ಕಾನೂನುಬದ್ಧವಾಗಿ ಸಿಗರೇಟು ಸೇದಬಹುದಾಗಿದೆ.
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ ಅಡಿಯಲ್ಲಿ ಈ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ, ದೇಶದಲ್ಲಿ ತಂಬಾಕು ಬಳಕೆಯನ್ನು ಒಳಗೊಂಡಿರುವ ಕಾನೂನನ್ನು ಕಠಿಣಗೊಳಿಸುವುದು ಇದರ ಉದ್ದೇಶ.
ಆರೋಗ್ಯ ಸಚಿವಾಲಯವು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನಿನ ಸೂಕ್ತ ತಿದ್ದುಪಡಿಯ ಬಗ್ಗೆ ಚರ್ಚಿಸಿತು, “ತಂಬಾಕು ನಿಯಂತ್ರಣಕ್ಕೆ ತಿದ್ದುಪಡಿ ಮಾಡಲು ಕಾನೂನಿನ ಉಪ-ಗುಂಪನ್ನು ರಚಿಸಲಾಗಿದೆ. ನಾವು ಶಿಫಾರಸುಗಳನ್ನು ಸಚಿವಾಲಯಕ್ಕೆ ಸಲ್ಲಿಸಿದ್ದೇವೆ” ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ತಂಬಾಕು ಬಳಕೆಯ ಕಾನೂನುಬದ್ಧ ವಯಸ್ಸನ್ನು 21 ವರ್ಷಕ್ಕೆ ನಿಗದಿಪಡಿಸಲಾಗಿದೆ, ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡದ ಮೊತ್ತವನ್ನು ಹೆಚ್ಚಿಸಲು ನಾವು ಶಿಫಾರಸು ಮಾಡಿದ್ದೇವೆ. ಹದಿಹರೆಯದವರು ಹೆಚ್ಚು ದುರ್ಬಲರಾಗಿದ್ದಾರೆ ಮತ್ತು ಗೆಳೆಯರ ಒತ್ತಡದಿಂದಾಗಿ ಸುಲಭವಾಗಿ ಅಭ್ಯಾಸವನ್ನು ರೂಢಿಸಿಕೊಳ್ಳಬಹುದು. ಹೀಗಾಗಿ ಈ ಕಾನೂನು ಧೂಮಪಾನದ ಅಭ್ಯಾಸದಲ್ಲಿ ತೊಡಗಿರುವ ಹದಿಹರೆಯದವರನ್ನು ನಿರ್ಬಂಧಿಸಲು ಸಹಾಯ ಮಾಡುತ್ತದೆ. ಪೋಷಕರು ಸಹ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಈ ಉತ್ಪನ್ನಗಳನ್ನು ಖರೀದಿಸಲು ಅಂಗಡಿಗಳಿಗೆ ಕಳುಹಿಸಿಕೊಡಬಾರದು “ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಭಾರತದಲ್ಲಿ ತಂಬಾಕು ಪದಾರ್ಥಗಳಿಗೆ ಸಂಬಂಧಿಸಿದಂತೆ ರೂ. 200 ರ ವರೆಗೆ ದಂಡವನ್ನು ವಿಧಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.