ನವದೆಹಲಿ: ಉತ್ತರ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಇದರಲ್ಲಿ ಒರ್ವ ಪೊಲೀಸ್ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನದ ಸಂದರ್ಭದಲ್ಲೇ ಹಿಂಸೆ ಭುಗಿಲೆದ್ದಿರುವ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದೆ. ”ಇಂತಹ ಹಿಂಸಾಚಾರಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವಾಗಿದೆ” ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಹೇಳಿದ್ದಾರೆ.
“ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೆಟ್ಟ ಹೆಸರು ತರುವ ಪಿತೂರಿ ಇದಾಗಿದೆ. ದಂಗೆಯ ಸಂದರ್ಭ ಒರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ. ಈ ಘಟನೆಯ ಬಗ್ಗೆ ಯಾರು ಜವಾಬ್ದಾರಿಯನ್ನು ಹೊರುತ್ತಾರೆ ಮತ್ತು ಯಾಕೆ ಈ ಪಿತೂರಿ ನಡೆಯುತ್ತಿದೆ ಎಂದು ನಾನು ಕಾಂಗ್ರೆಸ್ ಪಕ್ಷ ಮತ್ತು ಇತರ ಕೆಲವು ಪಕ್ಷಗಳಲ್ಲಿ ಕೇಳಲು ಬಯಸುತ್ತೇನೆ” ಎಂದಿದ್ದಾರೆ.
“ಶಹೀನ್ ಬಾಗ್ನಲ್ಲಿ ಕಳೆದ ಎರಡು ತಿಂಗಳ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರತಿಭಟನೆಗಳು ಮಿತಿಯಲ್ಲಿದ್ದರೆ ಅದನ್ನು ಸಹಿಸಿಕೊಳ್ಳಬಹುದು. ಆದರೆ ನಾವು ಯಾವುದೇ ಹಿಂಸಾಚಾರವನ್ನು ಸಹಿಸುವುದಿಲ್ಲ, ಹಿಂಸೆಯ ವಿರುದ್ಧ ನಾವು ಕ್ರಮವನ್ನು ಕಟ್ಟುನಿಟ್ಟಾಗಿ ತೆಗೆದುಕೊಳ್ಳುತ್ತೇವೆ. ಈ ಹಿಂಸಾಚಾರಕ್ಕೆ ಕಾರಣರಾದ ಯಾವುದೇ ವ್ಯಕ್ತಿಯನ್ನು ಸುಮ್ಮನೆ ಬಿಡುವುದಿಲ್ಲ” ಎಂದಿದ್ದಾರೆ.
“ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶಕ್ಕೆ ಭೇಟಿ ನೀಡಿದಾಗ ಭಾರತದ ಹೆಸರನ್ನು ಕೆಣಕಲು ಈ ಹಿಂಸಾಚಾರವನ್ನು ನಡೆಸಲಾಗಿದೆ. ದೆಹಲಿ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಬಹಿರಂಗಪಡಿಸಬೇಕು. ನಾವು ಅಗತ್ಯವಿರುವ ಎಲ್ಲ ಪಡೆಗಳನ್ನು ದೆಹಲಿಗೆ ಕರೆತಂದಿದ್ದೇವೆ ಮತ್ತು ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸರಿಗೆ ಆದೇಶವನ್ನೂ ನೀಡಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಗುರುತಿಸಲಾಗುವುದು “ಎಂದು ರೆಡ್ಡಿ ಹೇಳಿದ್ದಾರೆ.
ಜಾಫರಬಾದ್, ಮೌಜ್ಪುರ ಮತ್ತು ಚಂದ್ಬಾಗ್ನಲ್ಲಿ ಪ್ರತಿಭಟನಾಕಾರರು ಮನೆಗಳು, ಅಂಗಡಿಗಳು ಮತ್ತು ವಾಹನಗಳನ್ನು ಸುಟ್ಟುಹಾಕಿದ್ದಾರೆ. ಕಲ್ಲುಗಳನ್ನು ಎಸೆದಿದ್ದಾರೆ. ಸಿಎಎ ಪರ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ನಡುವೆ ಘರ್ಷಣೆಯಿಂದ ಈ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ.
ದೆಹಲಿ ಪೊಲೀಸ್ ಹೆಡ್ ಕಾನ್ಸ್ಟೆಬಲ್ ರತನ್ ಲಾಲ್ ಮೃತಪಟ್ಟಿದ್ದಾರೆ. ಇನ್ನೂ ಮೂವರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.