ಚೆನ್ನೈ: ತಮಿಳುನಾಡು ಪೊಲೀಸ್ ಪಡೆಯ ವಿಶೇಷ ಸಬ್ ಇನ್ಸ್ಪೆಕ್ಟರ್ ವೈ.ವಿಲ್ಸನ್ ಅವರ ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ತಮಿಳುನಾಡು ರಾಜ್ಯದ ಹಲವಾರು ಸ್ಥಳಗಳಲ್ಲಿ ಶೋಧ ಕಾರ್ಯವನ್ನು ನಡೆಸಿದೆ.
ತೂತುಕುಡಿ, ಕುಡಲೂರು, ಸೇಲಂ, ನೆಯೆವೆಲಿ ಮತ್ತು ಚೆನ್ನೈನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2020ರ ಜನವರಿ 8 ರಂದು ತಮಿಳುನಾಡು – ಕೇರಳ ಗಡಿ ಚೆಕ್ಪೋಸ್ಟ್ನಲ್ಲಿ ವಿಲ್ಸನ್ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎ. ಅಬ್ದುಲ್ ಶಮೀಮ್ ಮತ್ತು ಥೌಫಿಕ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕದ ಉಡುಪಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಇಸಿಸ್ ಭಯೋತ್ಪಾದಕ ಸಂಘಟನೆಯ ಆಪರೇಟಿವ್ ಆಗಿದ್ದ ಸಿ. ಖಾಜಾ ಮೊಯ್ದೀನ್ ಎಂಬಾತನನ್ನು ಈ ವರ್ಷದ ಆರಂಭದಲ್ಲಿ ದೆಹಲಿಯಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ ಹಿನ್ನಲೆಯಲ್ಲಿ ಪ್ರತಿಕಾರವಾಗಿ ವಿಲ್ಸನ್ನನ್ನು ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ನಕಲಿ ದಾಖಲೆಗಳ ಆಧಾರದ ಮೇಲೆ ಭಯೋತ್ಪಾದಕ ಶಂಕಿತ ಆರೋಪಿಗಳಿಗೆ ಸಿಮ್ ಕಾರ್ಡ್ಗಳ ಪೂರೈಕೆಗೆ ಸಂಬಂಧಿಸಿದ ಸ್ಥಳಗಳ ಬಗ್ಗೆ ಎನ್ಐಎ ಶೋಧ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.