ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದ ಮೊದಲ ವಾರ್ಷಿಕೋತ್ಸವವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಮೂರು ಸೇನೆಗಳ ಹಿರಿಯರು ಹುತಾತ್ಮ ಯೋಧರಿಗೆ ಗೌರವಾರ್ಥವಾಗಿ ಮಾಲಾರ್ಪಣೆ ಮಾಡಿದರು.
ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಸೈನಿಕರಿಗೆ ಈ ಯುದ್ಧ ಸ್ಮಾರಕ ಉನ್ನತ ಗೌರವವಾಗಿದೆ, ಅವರ ಸೇವೆ ಮತ್ತು ತ್ಯಾಗಕ್ಕೆ ಭಾರತ ಯಾವಾಗಲೂ ಚಿರಋಣಿಯಾಗಿರುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಸ್ವಾತಂತ್ರ್ಯದ ನಂತರ ನಡೆದ ವಿವಿಧ ಯುದ್ಧಗಳು ಮತ್ತು ಆಂತರಿಕ ಭದ್ರತಾ ಸವಾಲುಗಳ ಸಮಯದಲ್ಲಿ ಕರ್ತವ್ಯದ ವೇಳೆ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರರ ಗೌರವಾರ್ಥವಾಗಿ ಈ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಈ ಸ್ಮಾರಕವನ್ನು ಕಳೆದ ವರ್ಷ ಫೆಬ್ರವರಿ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ್ದ ಮೋದಿ, ”ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದವರ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದೆ” ಎಂದಿದ್ದರು.
ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಇಂದು ಯುದ್ಧ ಸ್ಮಾರಕದಲ್ಲಿ ಸಮಾರಂಭವನ್ನು ನಡೆಸಲಾಗಿದ್ದು, ಈ ವೇಳೆ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮೂರು ಸೇನೆಗಳ ಹಿರಿಯರು ಮಾಲಾರ್ಪಣೆ ಮಾಡಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಲಿದ್ದಾರೆ.
ದಂಗೆ ವಿರೋಧಿ ಕಾರ್ಯಾಚರಣೆ ಮತ್ತು ಶಾಂತಿ ಕಾಪಾಡುವ ಕಾರ್ಯಾಚರಣೆಗಳಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಸೈನಿಕರನ್ನು ರಾಷ್ಟ್ರೀಯ ಯುದ್ಧ ಸ್ಮಾರಕ ಸ್ಮರಿಸುತ್ತದೆ. ಸ್ವಾತಂತ್ರ್ಯದ ಬಳಿಕ ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಕಾಪಾಡಲು ಭಾರತೀಯ ಸಶಸ್ತ್ರ ಪಡೆಗಳ 25 ಸಾವಿರಕ್ಕೂ ಹೆಚ್ಚು ಸೈನಿಕರು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವದಂದು ಅಮರ್ ಜವಾನ್ ಜ್ಯೋತಿ ಬದಲಿಗೆ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಸೈನಿಕರಿಗೆ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು.
ಈ ಸ್ಮಾರಕವು ನಾಗರಿಕರಲ್ಲಿ ಉನ್ನತ ನೈತಿಕ ಮೌಲ್ಯಗಳು, ತ್ಯಾಗ ಮತ್ತು ರಾಷ್ಟ್ರೀಯತೆಯ ಪ್ರಜ್ಞೆಯನ್ನು ಬಲಪಡಿಸಲು ಸಹಾಯ ಮಾಡುತ್ತಿದೆ. ಕಳೆದ ಒಂದು ವರ್ಷದಲ್ಲಿ, ದೇಶೀಯ ಮತ್ತು ವಿದೇಶಿ ಗಣ್ಯರು ಸೇರಿದಂತೆ 21 ಲಕ್ಷಕ್ಕೂ ಹೆಚ್ಚು ಜನರು ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ.
The Nation observes the first anniversary of National War Memorial which was inaugurated on this day in 2019. This War Memorial is a tribute to those fallen soldiers who made supreme sacrifices in the line of duty. India will always remain indebted to their service and sacrifice.
— Rajnath Singh (@rajnathsingh) February 25, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.