ನವದೆಹಲಿ: ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧಗಳು ಸರ್ಕಾರದಿಂದ ಸರ್ಕಾರಕ್ಕೆ ಮಾತ್ರ ಸೀಮಿತವಾಗಿಲ್ಲ, ಆದರೆ ಜನ ಕೇಂದ್ರಿತ ಮತ್ತು ಜನರಿಂದ ಜನರ ಸಂಬಂಧ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡು ದಿನಗಳ ಭಾರತ ಭೇಟಿಯಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮೋದಿ ಅವರು ಜಂಟಿ ಪತ್ರಿಕಾ ಹೇಳಿಕೆಯನ್ನು ಹೊರಡಿಸಿದ್ದಾರೆ.
“ಪ್ರಧಾನಿ ಮೋದಿ ಮತ್ತು ನಾನು ಮುಕ್ತ ಮತ್ತು ಸಮತೋಲಿತ ಇಂಡೋ-ಪೆಸಿಫಿಕ್ ಪ್ರದೇಶ ಮತ್ತು ಸಮಗ್ರ ವ್ಯಾಪಾರ ಒಪ್ಪಂದಕ್ಕಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ನಾವು ರಕ್ಷಣೆಯ ಬಗ್ಗೆಯೂ ವಿವರವಾಗಿ ಚರ್ಚಿಸಿದ್ದೇವೆ ಮತ್ತು ಸಮಗ್ರ ರಕ್ಷಣಾ ಒಪ್ಪಂದಕ್ಕೆ ಸಮ್ಮತಿಸಿದ್ದೇವೆ. ಈ ಒಪ್ಪಂದವು 24 MH-60 ರೊಮಿಯೋ ಹೆಲಿಕಾಫ್ಟರ್ ಖರೀದಿಯನ್ನು ಒಳಗೊಂಡಿದೆ. ಆರು ಎಹೆಚ್ -64 ಇ ಅಪಾಚೆ ಹೆಲಿಕಾಪ್ಟರ್ಗಳನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತೊಂದು ಒಪ್ಪಂದಕ್ಕೂ ಸಹಿ ಹಾಕಲಾಗಿದೆ” ಎಂದು ಜಂಟಿ ಹೇಳಿಕೆಯಲ್ಲಿ ಟ್ರಂಪ್ ಹೇಳಿದ್ದಾರೆ.
“ಕಳೆದ ಎರಡು ದಿನಗಳು, ವಿಶೇಷವಾಗಿ ನಿನ್ನೆ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮ ನನಗೆ ದೊಡ್ಡ ಗೌರವವಾಗಿದೆ. ನನಗಿಂತಲೂ ಜನರು ನಿಮಗಾಗಿ (ಮೋದಿ) ಅಲ್ಲಿ ನೆರೆದಿದ್ದರು. ನಾನು ನಿಮ್ಮನ್ನು ಪ್ರಸ್ತಾಪಿಸಿದಾಗಲೆಲ್ಲಾ ಜನ ಹೆಚ್ಚು ಉತ್ಸಾಹಭರಿತರಾಗುತ್ತಿದ್ದರು. ಜನರು ಪ್ರೀತಿಸುತ್ತಾರೆ ಅದೇ ಕಾರಣದಿಂದ ನೀವು ಇಲ್ಲಿದ್ದೀರಿ” ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.
ಅಮೆರಿಕಾ ಮತ್ತು ಭಾರತದ ನಡುವೆ ಭಾರತೀಯ ಸೇನೆ ಮತ್ತು ನೌಕಾಪಡೆಗಾಗಿ ಹೆಲಿಕಾಫ್ಟರ್ ಖರೀದಿಗಾಗಿ $3 ಬಿಲಿಯನ್ ಮೌಲ್ಯದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.