ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ದೆಹಲಿ ಅಕ್ಷರಶಃ ನಲುಗಿ ಹೋಗಿದೆ. 20 ಜನರು ಹಿಂಸೆಗೆ ಬಲಿಯಾಗಿದ್ದು, 200 ಜನರು ಗಾಯಗೊಂಡಿದ್ದಾರೆ. ಪೊಲೀಸರ ಕಟ್ಟುನಿಟ್ಟಿನ ಕ್ರಮ ಮತ್ತು ಸರ್ಕಾರದ ಮನವಿಯ ನಡುವೆಯೂ ಪ್ರತಿಭಟನಾಕಾರರು ಹಿಂಸಾಚಾರವನ್ನು ಭುಗಿಲೆಬ್ಬಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ದೆಹಲಿಯ ವಿವಿಧ ಭಾಗಗಳಲ್ಲಿನ ಪರಿಸ್ಥಿತಿಯ ಬಗ್ಗೆ ಕೂಲಂಕುಷವಾಗಿ ಪರಿಶೀಲನೆಗಳನ್ನು ನಡೆಸಿದ್ದೇನೆ. ಪೊಲೀಸರು ಮತ್ತು ಇತರ ಏಜೆನ್ಸಿಗಳು ಶಾಂತಿ ಮತ್ತು ಸಹಜತೆಯನ್ನು ಕಾಪಾಡಲು ತಳ ಮಟ್ಟದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿವೆ” ಎಂದಿದ್ದಾರೆ.
ಶಾಂತಿ ಮತ್ತು ಸುವ್ಯವಸ್ಥೆ ನಮ್ಮ ಕೇಂದ್ರ ಮೌಲ್ಯಗಳಾಗಿವೆ. ಎಲ್ಲಾ ಸಂದರ್ಭದಲ್ಲೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕೆಂಬುದು ದೆಹಲಿಯ ಸಹೋದರ ಮತ್ತು ಸಹೋದರಿಯರಿಗೆ ನಮ್ಮ ಮನವಿಯಾಗಿದೆ ಎಂದು ಮೋದಿ ಹೇಳಿದ್ದಾರೆ.
Had an extensive review on the situation prevailing in various parts of Delhi. Police and other agencies are working on the ground to ensure peace and normalcy.
— Narendra Modi (@narendramodi) February 26, 2020
Peace and harmony are central to our ethos. I appeal to my sisters and brothers of Delhi to maintain peace and brotherhood at all times. It is important that there is calm and normalcy is restored at the earliest.
— Narendra Modi (@narendramodi) February 26, 2020
ದೆಹಲಿ ಗಲಭೆಗೆ ಸಂಬಂಧಿಸಿದಂತೆ ನಾಸೀರ್ ಮತ್ತು ಚೆನು ಗ್ಯಾಂಗಿನ 12 ಮಂದಿಯನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.