
ಲಕ್ನೋ: ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್, ಅವರು ಪತ್ನಿ ಮತ್ತು ಮಗನಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಬುಧವಾರ ಇವರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
ಮಾರ್ಚ್ 2ರಂದು ಇವರ ಪ್ರಕರಣದ ವಿಚಾರಣೆಯು ನಡೆಯಲಿದೆ.
ಅಜಂಖಾನ್ ಕುಟುಂಬದವರ ವಿರುದ್ಧ ವಿವಿಧ ಪ್ರಕರಣ ದಾಖಲಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ಇವರಿಗೆ ಹಲವು ಬಾರಿ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಇವರು ಇದನ್ನು ನಿರ್ಲಕ್ಷ್ಯ ಮಾಡಿದ್ದರು. ಹೀಗಾಗಿ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ.
ನಿರೀಕ್ಷಣಾ ಜಾಮೀನು ಪಡೆಯಲು ಅಜಂಖಾನ್ ಸಾಕಷ್ಟು ಪ್ರಯತ್ನಗಳನ್ನು ಮಾಡಿ ವಿಫಲರಾಗಿದ್ದಾರೆ.
ಅಜಂಖಾನ್ ಕುಟುಂಬದವರ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ.
ಭೂ ಕಬಳಿಕೆ, ಕೋಣ ಕಳ್ಳತನ, ಆಡು ಕಳ್ಳತನ, ಪುಸ್ತಕ ಕಳ್ಳತನ ಪ್ರಕರಣಗಳು ಅಜಂಖಾನ್ ವಿರುದ್ಧ ದಾಖಲಾಗಿದೆ. ಅವರ ಮಗನ ವಿರುದ್ಧ ಜನನ ದಾಖಲೆಗಳ ಫೋರ್ಜರಿ ಪ್ರಕರಣ ದಾಖಲಿಸಲಾಗಿದೆ. ಫೋರ್ಜರಿ ಮಾಡಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯತ್ವವನ್ನೂ ರದ್ದುಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


