ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಸೇನಾಡಳಿತಗಾರ ಪರ್ವೇಜ್ ಮುಶರಫ್ ವಿರುದ್ಧ ಗುರುವಾರ ಇಸ್ಲಾಮಾಬಾದ್ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.
2007ರ ಲಾಲ್ ಮಸೀದಿಯ ಧರ್ಮಗುರು ಅಬ್ದುಲ್ ರಶೀದ್ ಘಾಜಿ ಅವರ ಹತ್ಯೆ ಪ್ರಕರಣದ ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗಲು ಪದೇ ಪದೇ ವಿಫಲರಾಗುತ್ತಿರುವ ಹಿನ್ನಲೆಯಲ್ಲಿ ಅವರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದ್ದು, ವಿಚಾರಣೆಯನ್ನು ಎ.27ಕ್ಕೆ ಮುಂದೂಡಲಾಗಿದೆ.
71 ವರ್ಷ ಮುಶರಫ್ ಪ್ರಸ್ತುತ ಕರಾಚಿಯಲ್ಲಿನ ತಮ್ಮ ಮಗಳ ಮನೆಯಲ್ಲಿದ್ದಾರೆ. ಬುಧವಾರ ಅವರು ವೈದ್ಯಕೀಯ ಚಿಕಿತ್ಸೆಗೆ ಒಳಪಟ್ಟಿದ್ದರು.
2007ರಲ್ಲಿ ಲಾಲ್ ಮಸೀದಿ ಮೇಲೆ ಮುಶರಫ್ ಕಾರ್ಯಾಚರಣೆ ನಡೆಸಿದ ವೇಳೆ ಅದರೊಳಗಿದ್ದ ಧರ್ಮಗುರು ಮತ್ತು ಅವರ ತಾಯಿ ಮೃತರಾಗಿದ್ದರು. ಈ ಹಿನ್ನಲೆಯಲ್ಲಿ ಮುಶರಫ್ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.