ಶ್ರೀನಗರ : ಹೊಸದಾಗಿ ರಚನೆಗೊಂಡ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಪ್ರಸ್ತುತ ಇರುವ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವ ಸಲುವಾಗಿ ಬುಧವಾರ ಭೂಸೇನಾ ಮುಖ್ಯಸ್ಥ ಎಂ.ಎಂ.ನಾರವಾಣೆ ಅವರು ಎರಡು ದಿನಗಳ ಕಾಶ್ಮೀರ ಭೇಟಿಯನ್ನು ಆರಂಭಿಸಿದ್ದಾರೆ. ನಾರವಾಣೆ ಅವರೊಂದಿಗೆ ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ವೈ. ಕೆ. ಜೋಶಿ ಮತ್ತು ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲಾನ್ ಅವರು ಇದ್ದಾರೆ.
ಸೇನಾ ಮುಖ್ಯಸ್ಥರ ನೇತೃತ್ವದ ತಂಡ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ನಿಯೋಜಿಸಲಾದ ರಚನೆಗಳು ಮತ್ತು ಘಟಕಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿತು. ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ, ಕದನ ವಿರಾಮ ಉಲ್ಲಂಘನೆ, ಪ್ರತೀಕಾರದ ಕ್ರಮಗಳು, ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಗಳು ಮತ್ತು ಕಾರ್ಯಾಚರಣೆಯ ಸನ್ನದ್ಧತೆ ಕುರಿತು ಸ್ಥಳೀಯ ಕಮಾಂಡರ್ಗಳು ತಂಡಕ್ಕೆ ವಿವರಿಸಿದರು.
ಹಿಮದಿಂದ ಆವೃತವಾದ ಎತ್ತರದ ಪ್ರದೇಶದಲ್ಲಿ ಮತ್ತು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ತೀಕ್ಷ್ಣವಾದ ಕಣ್ಗಾವಲು, ಜಾಗರೂಕತೆ, ಎಚ್ಚರಿಕೆ ಮೂಲಕ ದೇಶಸೇವೆ ಮಾಡುತ್ತಿರುವ ಸೈನಿಕರ ಮನೋಸ್ಥೈರ್ಯವನ್ನು ನಾರವಾಣೆ ಅವರು ಶ್ಲಾಘಿಸಿದ್ದಾರೆ.
ಸೈನಿಕರೊಂದಿಗೆ ಸಂವಾದ ನಡೆಸಿದ ನರವಾಣೆ ಅವರು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸದಾ ಸನ್ನದ್ಧರಾಗಿರುವಂತೆ ಸೂಚಿಸಿದರು. ಅಲ್ಲದೇ, ಎಲ್ಲಾ ಸಮಯದಲ್ಲೂ ಭದ್ರತಾ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಿದ್ಧರಾಗಿರುವ ಅಗತ್ಯವನ್ನು ಅವರು ಪುನರುಚ್ಛರಿಸಿದರು.
ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಆದರೆ ಭದ್ರತಾ ಪಡೆಗಳು ಅಲ್ಲಿ ಈಗಲೂ ಕಟ್ಟುನಿಟ್ಟಿನ ಕಣ್ಗಾವಲನ್ನು ಇರಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.