ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಇಂದು 78ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅರಮನೆ ಮೈದಾನದಲ್ಲಿ ದೊಡ್ಡ ಸಮಾರಂಭವನ್ನೇ ಏರ್ಪಡಿಸಲಾಗಿದೆ. ಗಣ್ಯಾತಿಗಣ್ಯರು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಪ್ರಧಾನಿ ನರೇಂದ್ರ ಮೋದಿಯವರು ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟ್ ಮಾಡಿರುವ ಮೋದಿ, “ಕರ್ನಾಟಕದ ಪರಿಶ್ರಮಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರು ರಾಜ್ಯದ ಪ್ರಗತಿಗಾಗಿ, ವಿಶೇಷವಾಗಿ ರೈತರ ಕಲ್ಯಾಣಕ್ಕಾಗಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ಉತ್ಸಾಹದಿಂದ ಶ್ರಮಿಸುತ್ತಿದ್ದಾರೆ. ಅವರ ಸುದೀರ್ಘ ಜೀವನ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.
Birthday greetings to Karnataka’s hardworking CM @BSYBJP Ji. He is passionately working for the state’s progress, especially on farmer welfare and rural development. I pray for his long life and good health.
— Narendra Modi (@narendramodi) February 27, 2020
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಯಡಿಯೂರಪ್ಪ ಅವರಿಗೆ ಟ್ವಿಟರ್ ಮೂಲಕ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.
“ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಕಾಮನೆಗಳು. ಸಮೃದ್ಧ ಕರ್ನಾಟಕವನ್ನು ಖಚಿತಪಡಿಸಿಕೊಳ್ಳಲು ಶ್ರಮಿಸುತ್ತಿರುವ ಅವರು ಪರಿಶ್ರಮಿ ಆಡಳಿತಗಾರರೆಂದು ಗುರುತಿಸಿಕೊಂಡಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಅವರ ಸನ್ಮಾನ ಕಾರ್ಯಕ್ರಮದಲ್ಲಿ ಹಾಜರಾಗಲು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
Birthday greetings and warm wishes to Karnataka CM, Sh. BS Yediyurappa. He has distinguished himself as a diligent administrator, who is working hard to ensure a prosperous Karnataka. I pray for his good health & long life. Looking forward to attend his felicitation. @BSYBJP
— Rajnath Singh (@rajnathsingh) February 27, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.