ನವದೆಹಲಿ: ಅಗ್ರಗಣ್ಯ ಟೆಲಿವಿಷನ್ ರೇಟಿಂಗ್ ಏಜೆನ್ಸಿ BARC ಸರ್ಕಾರಕ್ಕೆ ನೀಡಿದ ಮಾಹಿತಿಯ ಪ್ರಕಾರ, ಕಳೆದ ಸೋಮವಾರ ನಡೆದ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಭಾರತದಾದ್ಯಂತ 180 ಟಿವಿ ಚಾನೆಲ್ಗಳಲ್ಲಿ 46 ಮಿಲಿಯನ್ ಜನರು ವೀಕ್ಷಿಸಿದ್ದಾರೆ. 2020ರ ಆಸ್ಕರ್ ಸಮಾರಂಭವನ್ನು ಇದರ ಅರ್ಧದಷ್ಟು ವೀಕ್ಷಕರು ಅಂದರೆ 23.6 ಮಿಲಿಯನ್ ಜನರು ವೀಕ್ಷಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಲ್ಲಿನ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರಿಗೆ ಅಹ್ಮದಾಬಾದ್ನ ಮೊಟೆರಾ ಕ್ರೀಡಾಂಗಣದಲ್ಲಿ ಸ್ವಾಗತವನ್ನು ಕೋರಿ, ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.
ಈ ಕಾರ್ಯಕ್ರಮವನ್ನು 180 ಕ್ಕೂ ಹೆಚ್ಚು ಟಿವಿ ಚಾನೆಲ್ಗಳು ನೇರಪ್ರಸಾರ ಮಾಡಿವೆ.
ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (BARC)ನ ಮಾಹಿತಿಯ ಪ್ರಕಾರ, ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೆಗಾ ಈವೆಂಟ್ ಭಾರತದಾದ್ಯಂತ ಒಟ್ಟು 11.69 ಬಿಲಿಯನ್ ವೀವಿಂಗ್ ಮಿನಿಟ್ ಹೊಂದಿತ್ತು
ದೇಶಾದ್ಯಂತ 180 ಟೆಲಿವಿಷನ್ ಚಾನೆಲ್ಗಳಲ್ಲಿ 46 ದಶಲಕ್ಷ ಜನರು ಈ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ ಎಂದು BARC ಹೇಳಿದೆ.
”ಇದು ಅತ್ಯಂತ ಸ್ಮರಣೀಯವಾದ ಆತಿಥ್ಯ. ಎಂದಿಗೂ ಇದನ್ನು ಮರೆಯಲಾರೆ” ಎಂದು ಟ್ರಂಪ್ ಹೇಳಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.