ಮುಂಬಯಿ : ಪಾಕಿಸ್ಥಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ಅಕ್ರಮ ನುಸುಳುಕೋರರ ಬಗ್ಗೆ ಮಾಹಿತಿ ನೀಡಿದವರಿಗೆ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತದೆ, ಮಾತ್ರವಲ್ಲದೇ ಸನ್ಮಾನವನ್ನೂ ಮಾಡಲಾಗುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಘೋಷಣೆ ಮಾಡಿದೆ.
ಈ ಬಗೆಗಿನ ಘೋಷಣೆಯುಳ್ಳ ಬ್ಯಾನರ್ ಅನ್ನು ಮಹಾರಾಷ್ಟ್ರದ ಔರಂಗಾಬಾದ್ನ ಸಂಭಾಜಿ ನಗರದಲ್ಲಿ ಹಾಕಲಾಗಿದೆ. ಬಾಂಗ್ಲಾದೇಶ ಮತ್ತು ಪಾಕಿಸ್ಥಾನದಿಂದ ಅಕ್ರಮವಾಗಿ ಬಂದಿರುವವರು ಮಹಾರಾಷ್ಟ್ರದಲ್ಲಿ ನೆಲೆಸಿರುವ ಬಗ್ಗೆ ಅನುಮಾನವಿದೆ. ಅವರನ್ನು ಹೊರಗೆ ಹಾಕುವ ಅವಶ್ಯಕತೆ ಇದೆ. ಹೀಗಾಗಿ ಅವರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಹೇಳಿದೆ.
ಕಳೆದ ಕೆಲವು ವರ್ಷಗಳಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ನುಸುಳಿ ಬಂದಿರುವ ಬಾಂಗ್ಲಾ ಮತ್ತು ಪಾಕ್ ನಾಗರಿಕರನ್ನು ಇಲ್ಲಿಂದ ಹೊರ ಹಾಕುವುದಕ್ಕಾಗಿ ಮಹಾರಾಷ್ಟ್ರ ನವನಿರ್ಮಾಣ ಸೇನೆ ಬೃಹತ್ ಮೆರವಣಿಗೆಯನ್ನು ಆಯೋಜಿಸಿದೆ ಎಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಿಳಿಸಿದ್ದಾರೆ.
ಅಲ್ಲದೇ ಅವರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲವನ್ನು ನೀಡಿದ್ದಾರೆ. ಅಲ್ಲದೇ, ರಾಷ್ಟ್ರೀಯ ನಾಗರಿಕ ನೋಂದಣಿಯನ್ನೂ ಬೆಂಬಲಿಸುವುದಾಗಿ ಹೇಳಿದ್ದಾರೆ. ಅಲ್ಲದೇ, ಅದನ್ನು ರಾಜ್ಯದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.