ನವದೆಹಲಿ: ಎಡಪಂಥೀಯರ ಪಾಲಿನ ಹೀರೋ ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಜರುಗಿಸಲು ದೆಹಲಿಯ ಆಡಳಿತರೂಢ ಆಮ್ ಆದ್ಮಿ ಪಕ್ಷ ಸಮ್ಮತಿಯನ್ನು ಸೂಚಿಸಿದೆ.
2016ರಲ್ಲಿ ಜೆಎನ್ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ವಿಷಯಕ್ಕೆ ಸಂಬಂಧಿಸಿದಂತೆ ಕನ್ಹಯ್ಯ ವಿರುದ್ಧ ಪ್ರಕರಣ ದಾಖಲಾಗಿದ್ದು. ಜನವರಿ 4 ರಂದು ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಅಲ್ಲದೇ, ಆರೋಪಿಯ ವಿರುದ್ಧ ಕ್ರಮ ಜರುಗಿಸಲು ದೆಹಲಿ ಸರ್ಕಾರ ಒಪ್ಪಿಗೆಗಾಗಿ ಕಾಯುತ್ತಿರುವುದಾಗಿ ಪೊಲೀಸರು ಹೇಳಿದ್ದರು.
ಕನ್ಹಯ್ಯ ಕುಮಾರ್ ಹಾಗೂ ಇತರ ಆರೋಪಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಪತ್ರ ಬರೆದಿದ್ದರು. ವರ್ಷಗಳಿಂದಲೂ ಇದು ದೆಹಲಿ ಸರ್ಕಾರದ ಮುಂದಿತ್ತು. ಇದೀಗ ದೆಹಲಿ ಸರ್ಕಾರ ಸಮ್ಮತಿಯನ್ನು ನೀಡಿದೆ.
ಸಂಸತ್ತಿನ ಮೇಲೆ ದಾಳಿ ನಡೆಸಿ ಗಲ್ಲು ಶಿಕ್ಷೆಗೆ ಗುರಿಯಾದ ಅಫ್ಜಲ್ ಗುರುವಿನ ಸ್ಮರಣಾರರ್ಥ ಜೆಎನ್ಯುನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ತುಕ್ಡೇ ತುಕ್ಡೇ ಗ್ಯಾಂಗ್’ ಎಂದು ಕುಖ್ಯಾತಿ ಪಡೆದ ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಸೇರಿದಂತೆ ಇತರರ ಗುಂಪು ಭಾರತದ ವಿರುದ್ಧ ಘೋಷಣೆಗಳನ್ನು ಕೂಗಿತ್ತು. ‘ಭಾರತ್ ತೇರ ತುಕ್ಡೇ ತುಕ್ಡೇ ಹೋಗ’ ಎಂಬ ಘೋಷಣೆಯನ್ನು ಈ ಗುಂಪು ಮೊಳಗಿಸಿತ್ತು. ಆ ಬಳಿಕವೇ ಗುಂಪಿಗೆ ‘ತುಕ್ಡೇ ತುಕ್ಡೇ ಗ್ಯಾಂಗ್’ ಎಂಬ ಹೆಸರು ಬಂದಿತ್ತು.
ಇದೀಗ ಕನ್ಹಯ್ಯ ಮತ್ತು ಆತನ ಪಟಾಲಂ ವಿರುದ್ಧ ದೇಶದ್ರೋಹದ ಕಾನೂನು ಕ್ರಮವನ್ನು ಜರುಗಿಸಲು ಪೊಲೀಸರಿಗೆ ಅನುಮತಿ ಸಿಕ್ಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.