ಚಿತ್ರಕೂಟ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರಪ್ರದೇಶದ ಚಿತ್ರಕೂಟದಲ್ಲಿ 10,000 ರೈತ ಉತ್ಪನ್ನಗಳ ಸಂಘಟನೆ EPOಗಳಿಗೆ ಚಾಲನೆಯನ್ನು ನೀಡಿದರು ಮತ್ತು ಬುಂದೇಲ್ಖಂಡ್ ಎಕ್ಸ್ಪ್ರೆಸ್ ವೇ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದರು.
ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇ ಅನ್ನು 15 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದು ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸಲಿದೆ. ಇದು ದೊಡ್ಡ ನಗರಗಳ ಸೌಲಭ್ಯಗಳನ್ನು ಇಲ್ಲಿನ ಜನರಿಗೆ ಒದಗಿಸಲಿದೆ ಎಂದು ಮೋದಿ ಹೇಳಿದರು.
EPOಗಳಿಗೆ ಚಾಲನೆಯನ್ನು ನೀಡಿ ಮಾತನಾಡಿದ ಮೋದಿ ಅವರು, “10,000 EPOಗಳಿಗೆ ಚಾಲನೆಯನ್ನು ನೀಡಲಾಗಿದ್ದು ಇದು ನಮ್ಮ ದೇಶದಾದ್ಯಂತ ರೈತರ ಆದಾಯವನ್ನು ವೃದ್ಧಿಸಿದೆ. ರೈತ ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿ ಪಡಿಸುವುದು, ಮಣ್ಣಿನ ಆರೋಗ್ಯ ಕಾರ್ಡನ್ನು ನೀಡುವುದು, ಯೂರಿಯಾ ದಿಲ್ಲಿ ಶೇ.100ರಷ್ಟು ಕಹಿಬೇವಿನ ಮಿಶ್ರಣವನ್ನು ಖಾತ್ರಿಪಡಿಸುವುದು, ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ನಮ್ಮ ಕರ್ತವ್ಯವಾಗಿದೆ” ಎಂದರು.
ಸುಮಾರು 12,000 ಕೋಟಿ ರೂಪಾಯಿಗಳನ್ನು ಇದುವರೆಗೆ ಉತ್ತರಪ್ರದೇಶದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಒಂದು ವರ್ಷದಲ್ಲಿ ಈ ಮೊತ್ತವನ್ನು ಜಮೆ ಮಾಡಲಾಗಿದೆ. ಇಲ್ಲಿ ಯಾವುದೇ ಮಧ್ಯವರ್ತಿಗಳು ಇಲ್ಲ. ನೇರವಾಗಿ ಹಣವನ್ನು ಖಾತೆಗೆ ಜಮೆ ಮಾಡಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.