ಶಾಮ್ಲಿ : ನಮ್ಮ ಸರ್ಕಾರವು ಯುಪಿ ಪೊಲೀಸರನ್ನು ಹೊಸ ಮತ್ತು ನವೀಕರಿಸಿದ ಶಸ್ತ್ರಾಸ್ತ್ರಗಳೊಂದಿಗೆ ಸಜ್ಜುಗೊಳಿಸುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಕೈರಾನಾದಲ್ಲಿ ಆರೋಗ್ಯ ಮೇಳ ಉದ್ಘಾಟಿಸಿದ ಮತ್ತು ಪೊಲೀಸ್ ಲೈನ್ಗೆ ಅಡಿಪಾಯ ಹಾಕಿದ ವೇಳೆ ಮಾತನಾಡಿದ ಅವರು, ”ವಂಚಕರು ಎಷ್ಟೇ ದೂರ ಹೋದರೂ ಅವರು ಪೊಲೀಸರ ಟಾರ್ಗೆಟ್ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.
ತಮ್ಮ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ”ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ 1,37,000 ಪೊಲೀಸ್ ಸಿಬ್ಬಂದಿಯನ್ನು ಪಾರದರ್ಶಕ ರೀತಿಯಲ್ಲಿ ನೇಮಕ ಮಾಡಲಾಗಿದೆ. ಯುಪಿ ಪೊಲೀಸರ ಕಾರ್ಯವು ಪ್ರಸ್ತುತ ವಿಶ್ವದಾದ್ಯಂತ ಪ್ರಶಂಸೆಗೆ ಪಾತ್ರವಾಗುತ್ತಿದೆ” ಎಂದು ಹೇಳಿದರು.
ರಾಜ್ಯದಲ್ಲಿ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯ ಸೌಲಭ್ಯವನ್ನು ಕಾಪಾಡಿಕೊಳ್ಳಲು ತನ್ನ ಸರ್ಕಾರ ಮಾಡಿದ ಪ್ರಯತ್ನವನ್ನು ವಿವರಿಸಿದ ಆದಿತ್ಯನಾಥ್ ಅವರು, ರಾಜ್ಯದಲ್ಲಿ ರೋಗವನ್ನು 56-60%ರಷ್ಟು ಮತ್ತು ಸಾವಿನ ಸಂಖ್ಯೆಯನ್ನು 90% ರಷ್ಟು ಕಡಿಮೆ ಮಾಡುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.
ಆರೋಗ್ಯ ಮೇಳವನ್ನು ಉದ್ಘಾಟಿಸಿದ ವೇಳೆ ಮಾತನಾಡಿದ ಅವರು, ಈ ಕಾರ್ಯಕ್ರಮದ ಮೂಲಕ ಜನರನ್ನು ಆಯುಷ್ಮಾನ್ ಭಾರತ್ ಎಂಬ ಸುವರ್ಣ ಕಾರ್ಡ್ಗೆ ಪ್ರವೇಶಿಸುವಂತೆ ಮಾಡಲಾಗಿದೆ ಎಂದಿದ್ದಾರೆ.
ಜನರು ಲಸಿಕೆಯನ್ನು ಸಕಾಲಿಕವಾಗಿ ಪಡೆಯಬೇಕೆಂದು ಒತ್ತಾಯಿಸಿದ ಅವರು, “ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಪ್ರಯತ್ನವಾಗಿರಬೇಕು. ಒಂದು ತಿಂಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ, ಶಾಲೆಗಳು, ಕಾಲೇಜುಗಳ ವಿದ್ಯಾರ್ಥಿಗಳು ತಮ್ಮನ್ನು ತಾವು ಸಾಂಕ್ರಾಮಿಕ ಕಾಯಿಲೆಗಳಿಂದ ರಕ್ಷಿಸಿಕೊಳ್ಳಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆಯಬೇಕು” ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.