ನವದೆಹಲಿ: ಭಾರತವು ಬೃಹತ್ ಆರ್ಥಿಕತೆಯಾಗಿರುವುದರಿಂದಲೇ ಅದು ಹೂಡಿಕೆಯನ್ನು ಪಡೆಯುತ್ತಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಅವರು ಬರೆದಿರುವ ‘ಕಾಮೆಂಟರಿ ಆನ್ ದಿ ಲಾ ಆಫ್ ಆರ್ಬಿಟ್ರೇಷನ್’ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಜಗತ್ತನ್ನು ಸಾಂಪ್ರದಾಯಿಕ ವಿಧಾನದಲ್ಲಿ ನೋಡಲು ಸಾಧ್ಯವಿಲ್ಲ ಮತ್ತು ಉದಯೋನ್ಮುಖ ಆರ್ಥಿಕತೆಗಳಿಗೆ ಅವುಗಳದ್ದೇ ಆದ ಗೌರವ ಸ್ಥಾನವನ್ನು ನೀಡಬೇಕಾಗಿದೆ” ಎಂದಿದ್ದಾರೆ.
‘ಪರಿವರ್ತನೆಗಾಗಿ ಸುಧಾರಣೆ, ಕಾರ್ಯ’ ಎಂಬುದು ಕೇಂದ್ರ ಸರ್ಕಾರದ ಧ್ಯೇಯವಾಕ್ಯವಾಗಿದೆ ಎಂದು ಅವರು ಪುನರುಚ್ಚರಿಸಿದರು.
“ಈ ಜಗತ್ತನ್ನು ಸಾಂಪ್ರದಾಯಿಕ ರೀತಿಯಲ್ಲಿ ನೋಡಲಾಗುವುದಿಲ್ಲ. ಉದಯೋನ್ಮುಖ ಆರ್ಥಿಕತೆಗಳಿಗೆ ಗೌರವದ ಸ್ಥಾನವನ್ನು ನೀಡಬೇಕಾಗಿದೆ. ಭಾರತವು ದೊಡ್ಡ ಆರ್ಥಿಕತೆಯಾಗಿರುವುದರಿಂದ ಹೂಡಿಕೆಯನ್ನು ಪಡೆಯುತ್ತಿದೆ. ಭಾರತ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ” ಎಂದು ರವಿಶಂಕರ್ ಹೇಳಿದ್ದಾರೆ.
ನೆಟ್ ನ್ಯುಟ್ರಾಲಿಟಿಯ ಹಿನ್ನೆಲೆಯಲ್ಲಿ ಅಂತರ್ಜಾಲವನ್ನು ಪ್ರವೇಶಿಸುವ ಹಕ್ಕು ಭಾರತದಲ್ಲಿ ನೆಗೋಶಬಲ್ ಅಲ್ಲ, ಇದು ಮಾಹಿತಿಯನ್ನು ಹೊಂದುವ ನಮ್ಮ ಹಕ್ಕಿನಿಂದ ಬಂದಿದೆ ಎಂದು ಪ್ರತಿಪಾದಿಸಿದ್ದಾರೆ.
ಈ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ, ಅಂತರರಾಷ್ಟ್ರೀಯ ನ್ಯಾಯಾಲಯದ ಉಪಾಧ್ಯಕ್ಷ ಸಲೀಮ್ ಮೂಲನ್, ಮತ್ತು ಹಿರಿಯ ವಕೀಲ ಡೇರಿಯಸ್ ಖಂಬಾಟಾ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.