ರಾಂಚಿ : ಶ್ರೀಮಂತರು, ದೊಡ್ಡ ದೊಡ್ಡ ಅಧಿಕಾರಿಗಳು, ಗಣ್ಯರು ಯಾವತ್ತೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದಿಲ್ಲ, ಅವರೇನಿದ್ದರೂ ಹೈಟೆಕ್ ಆಸ್ಪತ್ರೆಗೆ ತೆರಳಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಆದರೆ ಜಾರ್ಖಂಡ್ ಜಿಲ್ಲಾಧಿಕಾರಿ ಮಾತ್ರ ಇದಕ್ಕೆ ವಿರುದ್ಧ. ಅವರು ಸ್ವತಃ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡು ಇತರರಿಗೆ ಪ್ರೇರಣೆಯಾಗಿದ್ದಾರೆ.
ಗೊಡ್ಡಾ ಜಿಲ್ಲೆಯ ಜಿಲ್ಲಾಧಿಕಾರಿ ಕಿರಾಣ್ ಕುಮಾರ್ ಪಸಿ ಅವರು ತಮ್ಮ ಎರಡನೇ ಹೆರಿಗೆಯನ್ನು ಗೊಡ್ಡಾ ಜಿಲ್ಲಾಸ್ಪತ್ರೆಯಲ್ಲಿ ಮಾಡಿಸಿಕೊಂಡಿದ್ದಾರೆ. ಅವರಿಗೆ ಗಂಡು ಮಗು ಜನಿಸಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಇವರು ತಮ್ಮ ಮೊದಲ ಹೆರಿಗೆಯನ್ನು ಕೂಡ 4 ವರ್ಷಗಳ ಹಿಂದೆ ಲಕ್ನೋದ ಸರ್ಕಾರಿ ಆಸ್ಪತ್ರೆಯಲ್ಲಿ ಮಾಡಿಸಿಕೊಂಡಿದ್ದರು.
ಸರ್ಕಾರಿ ಆಸ್ಪತ್ರೆ ಎಂದು ಮೂಗು ಮುರಿಯುವ ಜನರಿಗೆ ಕಿರಾಣ್ ಅವರು ಮಾದರಿಯಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲೂ ಸುಸಜ್ಜಿತ ವ್ಯವಸ್ಥೆಗಳಿವೆ, ಅಲ್ಲಿ ಹೆರಿಗೆ ಮಾಡಿಸುವುದು ಸುರಕ್ಷಿತ ಎಂಬ ಸಂದೇಶವನ್ನು ಅವರು ಸಾರಿದ್ದಾರೆ.
ಜಿಲ್ಲಾಧಿಕಾರಿಯವರ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಶ್ಲಾಘನೆಗಳು ವ್ಯಕ್ತವಾಗಿವೆ. ಸ್ವತಃ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಅವರು ಈ ಕಾರ್ಯಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ನಡೆ ನಿಜಕ್ಕೂ ಮಾದರಿ ಎಂದು ಬಣ್ಣಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲೂ ಮಹಿಳಾ ಅಧಿಕಾರಿಯ ಕಾರ್ಯಕ್ಕೆ ಪ್ರಶಂಸೆಯ ಸುರಿಮಳೆಯೇ ಬಂದಿದೆ. ಓರ್ವ ಸರ್ಕಾರಿ ಅಧಿಕಾರಿಯಾಗಿ ಅವರು ಸರ್ಕಾರ ಸವಲತ್ತುಗಳ ಬಗೆಗಿನ ಅರಿವನ್ನು ಜನರಿಗೆ ಸೂಕ್ತವಾದ ರೀತಿಯಲ್ಲಿ ಮೂಡಿಸಿದ್ದಾರೆ ಎಂಬ ಅನಿಸಿಕೆಗಳು ವ್ಯಕ್ತವಾಗಿದೆ.
महिला चिकित्सकों की टीम ने सफल ऑपरेशन किया। बताया कि जच्चा और बच्चा दोनों स्वस्थ हैं।#Godda #Jharkhand @HemantSorenJMMhttps://t.co/i5wKNkcExy
— Hindustan (@Live_Hindustan) March 1, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.