ರಿಷಿಕೇಶ: ದಕ್ಷಿಣ ಆಫ್ರಿಕಾದ ಪ್ರಸಿದ್ಧ ಕ್ರಿಕೆಟ್ ನಿರೂಪಕ ಮತ್ತು ಮಾಜಿ ಟೆಸ್ಟ್ ಮತ್ತು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟಿಗ ಜಾಂಟಿ ರೋಡ್ಸ್ ಅವರು ಭಾರತದ ಪವಿತ್ರ ಗಂಗೆಯಲ್ಲಿ ಸ್ನಾನ ಮಾಡಿ ಪುನೀತರಾಗಿದ್ದಾರೆ. ಅಲ್ಲದೇ, ಈ ಬಗೆಗಿನ ಅನುಭವವನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
”ಪವಿತ್ರ ಗಂಗೆಯ ತಣ್ಣೀರಿನಲ್ಲಿ ಮುಳುಗುವ ಪ್ರಯೋಜನಗಳು ದೈಹಿಕ ಮತ್ತು ಆಧ್ಯಾತ್ಮಿಕ ಎರಡೂ ಆಗಿವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಭಾರತದ ಅತ್ಯಂತ ಪವಿತ್ರ ನದಿ ಎಂದು ಕರೆಯಲ್ಪಡುವ ಗಂಗೆ ಹಿಂದೂಗಳ ಪಾಲಿನ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರ. ಇಲ್ಲಿ ಮುಳುಗೇಳುವುದರಿಂದ ಪಾಪಗಳು ಕಳೆಯುತ್ತವೆ ಎಂಬ ನಂಬಿಕೆ ಇದೆ.
ಭಾರತದ ಬಗ್ಗೆ ಅಪಾರ ಅಭಿಮಾನವನ್ನು ಇಟ್ಟುಕೊಂಡಿರುವ ಜಾಂಟಿ ರೋಡ್ಸ್ ತಮ್ಮ ಮಗಳಿಗೆ ಇಂಡಿಯಾ ಎಂದು ಹೆಸರಿಟ್ಟಿದ್ದಾರೆ.
Benefits of cold water immersion in the Holy Ganges are both physical and spiritual #moksha #rishikesh #internationalyogfestival pic.twitter.com/yKjJUZsoz2
— Jonty Rhodes (@JontyRhodes8) March 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.