ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಗೆ ಸಂಬಂಧಿಸಿದ ಕಳೆದ ವರ್ಷ ಡಿಸೆಂಬರ್ವರೆಗೆ ದೇಶಾದ್ಯಂತ 2.4 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ ಎಂದು ಸರ್ಕಾರ ಬುಧವಾರ ಹೇಳಿದೆ.
ಕಾನೂನು ಮತ್ತು ನ್ಯಾಯ ಸಚಿವಾಲಯವು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದ ಪ್ರಕಾರ, ಅತ್ಯಾಚಾರ ಪ್ರಕರಣಗಳು ಬಾಕಿ ಉಳಿದಿರುವ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ, ಇಲ್ಲಿ 66,994 ಪ್ರಕರಣಗಳು ಬಾಕಿ ಇದೆ. ಮಹಾರಾಷ್ಟ್ರದಲ್ಲಿ 21,691 ಮತ್ತು ಪಶ್ಚಿಮ ಬಂಗಾಳದಲ್ಲಿ 20,511 ಪ್ರಕರಣಗಳನ್ನು ಬಾಕಿ ಇವೆ.
“ಹೈಕೋರ್ಟ್ಗಳಿಂದ ಪಡೆದ ಮಾಹಿತಿಯ ಪ್ರಕಾರ, ಅತ್ಯಾಚಾರ ಮತ್ತು ಪೊಕ್ಸೊ ಕಾಯ್ದೆಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಡಿಸೆಂಬರ್ 31, 2019 ರಂತೆ 2,44,001 ಆಗಿದೆ” ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರವನ್ನು ಲೋಕಸಭೆಗೆ ನೀಡಿದ್ದಾರೆ.
ಕ್ರಿಮಿನಲ್ ಕಾನೂನು (ತಿದ್ದುಪಡಿ) ಕಾಯ್ದೆ, 2018 ರ ಪ್ರಕಾರ, ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳ ತ್ವರಿತ ವಿಚಾರಣೆ ಮತ್ತು ವಿಲೇವಾರಿಗಾಗಿ ದೇಶಾದ್ಯಂತ 1,023 ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳನ್ನು (ಎಫ್ಟಿಎಸ್ಸಿ) ಸ್ಥಾಪಿಸಲು ಯೋಜನೆಯನ್ನು ಅಂತಿಮಗೊಳಿಸಲಾಗಿದೆ.
ಇಲ್ಲಿಯವರೆಗೆ, ಕೇಂದ್ರವು 99.43 ಕೋಟಿ ರೂ.ಗಳ ನಿಧಿಯನ್ನು 2019-20ರ ಅವಧಿಯಲ್ಲಿ 27 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡುಗಡೆ ಮಾಡಿದ್ದು, ಇದುವರೆಗೆ 649 ಸಂಖ್ಯೆಯ ಎಫ್ಟಿಎಸ್ಸಿಗಳನ್ನು ಸ್ಥಾಪಿಸಲು ಸಮ್ಮತಿಸಲಾಗಿದೆ.
“ಹೈಕೋರ್ಟ್ಗಳಿಂದ ಪಡೆದ ಮಾಹಿತಿಯ ಪ್ರಕಾರ, 2020 ಜನವರಿ 31 ರವರೆಗೆ ಈಗಾಗಲೇ 195 ಎಫ್ಟಿಎಸ್ಸಿಗಳನ್ನು ಸ್ಥಾಪಿಸಲಾಗಿದೆ” ಎಂದು ಸಚಿವಾಲಯ ತಿಳಿಸಿದೆ. ಆಶ್ಚರ್ಯಕರ ಸಂಗತಿಯೆಂದರೆ, ಗರಿಷ್ಠ ಸಂಖ್ಯೆಯ ಅತ್ಯಾಚಾರ ಪ್ರಕರಣಗಳು ಬಾಕಿ ಇರುವ ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಒಂದೇ ಒಂದು ಎಫ್ಟಿಎಸ್ಸಿ ಸಹ ಸ್ಥಾಪನೆಯಾಗಿಲ್ಲ.
ಪ್ರಸ್ತಾವಿತ ಎಫ್ಟಿಎಸ್ಸಿಗಳ ಪ್ರಕಾರ, ಗರಿಷ್ಠ 218 ನ್ಯಾಯಾಲಯಗಳು ಉತ್ತರಪ್ರದೇಶದಲ್ಲಿ, 138 ಮಹಾರಾಷ್ಟ್ರದಲ್ಲಿ ಮತ್ತು 123 ನ್ಯಾಯಾಲಯಗಳು ಪಶ್ಚಿಮ ಬಂಗಾಳದಲ್ಲಿ ಸ್ಥಾಪನೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.