ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸುವ ದೃಷ್ಟಿಯಿಂದ ಜಮ್ಮು ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿತ್ತು. ಇದೀಗ ಆರು ತಿಂಗಳ ನಂತರ ಅಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧವನ್ನು ಬುಧವಾರ ಅಧಿಕಾರಿಗಳು ತೆಗೆದುಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಆಡಳಿತವು ಬುಧವಾರ ಎಲ್ಲಾ ವೆಬ್ಸೈಟ್ಗಳಿಗೆ 2 ಜಿ ಮೊಬೈಲ್ ಡೇಟಾ ಸೇವೆಗಳು ಮತ್ತು ಫಿಕ್ಸ್ಡ್ ಲೈನ್ ಇಂಟರ್ನೆಟ್ ಸೇವೆಗಳನ್ನು ಪ್ರವೇಶಿಸಲು ಮಾರ್ಚ್ 17 ರವರೆಗೆ ಅವಕಾಶ ನೀಡಿದೆ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳ ಮೇಲಿನ ನಿಷೇಧವನ್ನು ತೆಗೆದುಹಾಕಿದೆ.
“ಅಂತಿಮವಾಗಿ ನಾವು, ವರ್ಚುವಲ್ ಪ್ರೈವೇಟ್ ನೆಟ್ವರ್ಕ್ (ವಿಪಿಎನ್)ಗಳನ್ನು ಬಳಸದೆ ವಿಶ್ವದ ಇತರ ಭಾಗಗಳೊಂದಿಗೆ ಸಂಪರ್ಕ ಸಾಧಿಸಬಹುದು” ಎಂದು ಶ್ರೀನಗರದ ನಿವಾಸಿಯೊಬ್ಬರು ಹೇಳಿದ್ದಾರೆ.
ಈ ಹಿಂದೆಯೇ ಸರ್ಕಾರವು ಕೇಂದ್ರಾಡಳಿತ ಪ್ರದೇಶದಲ್ಲಿ ಇಂಟರ್ನೆಟ್ ಅನ್ನು ಪುನಃಸ್ಥಾಪನೆ ಮಾಡಿತ್ತು, ಆದರೆ ಶ್ವೇತ ಪಟ್ಟಿ ಮಾಡಲಾದ ಸೈಟ್ಗಳಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿತ್ತು.
ಆದರೂ, ಇಂಟರ್ನೆಟ್ ಬಳಕೆದಾರರು ನಿರ್ಬಂಧಿತ ಸೈಟ್ಗಳನ್ನು ಪ್ರವೇಶಿಸಲು ವಿಪಿಎನ್ಗಳನ್ನು ಬಳಸಿಕೊಳ್ಳುತ್ತಿದ್ದರು.
370ನೇ ವಿಧಿ ರದ್ಧತಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಇಂಟರ್ನೆಟ್ ಸೇವೆಯನ್ನು ರದ್ದುಗೊಳಿಸುವುದು ಮತ್ತು ಸಾಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧವನ್ನು ವಿಧಿಸುವುದು ಅನಿವಾರ್ಯವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.