ನವದೆಹಲಿ: ಕೊರೋನವೈರಸ್ ಭೀತಿಯ ಹಿನ್ನೆಲೆಯಲ್ಲಿ ಪಂಜಾಬ್ನ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವಿನ ಜನಪ್ರಿಯ ಡೈಲಿ ರಿಟ್ರೀಟ್ ಸಮಾರಂಭದಲ್ಲಿ ಭಾಗವಹಿಸಲು ಜನರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್) ಶುಕ್ರವಾರ ತಿಳಿಸಿದೆ.
ಬಿಎಸ್ಎಫ್ ಹೊರಡಿಸಿರುವ ಈ ಮುನ್ನೆಚ್ಚರಿಕೆ ಕ್ರಮಗಳು ಶನಿವಾರದಿಂದಲೇ ಜಾರಿಗೆ ಬರಲಿದೆ.
ಧ್ವಜ ಕೆಳಗೆ ಇಳಿಸುವ ಮತ್ತು ಇತರ ಡ್ರಿಲ್ಗಳನ್ನುನಡೆಸುವ ದೈನಂದಿನ ಕರ್ತವ್ಯವನ್ನು ಬಿಎಸ್ಎಫ್ ಮುಂದುವರಿಸಲಿದೆ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.
“ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಸಭೆಗಳನ್ನು ತಪ್ಪಿಸಬೇಕು. ಆದ್ದರಿಂದ ಸಮಾರಂಭಕ್ಕೆ ಭೇಟಿ ನೀಡಲು ಜನರಿಗೆ ಅವಕಾಶಗಳನ್ನು ನೀಡಲಾಗುವುದಿಲ್ಲ” ಎಂದು ಹೇಳಿದೆ.
ಈ ರಿಟ್ರೀಟ್ ಕಾರ್ಯಕ್ರಮಗಳು ಪ್ರತಿ ಸಂಜೆ ನಡೆಯುತ್ತದೆ. ಭಾರತ ಮತ್ತು ಪಾಕಿಸ್ಥಾನದ ರಾಷ್ಟ್ರ ಧ್ವಜಗಳನ್ನು ಆಯಾ ಗಡಿ ಕಾವಲು ಪಡೆಗಳು ಈ ವೇಳೆ ಕೆಳಕ್ಕೆ ಇಳಿಸುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.