ನವದೆಹಲಿ: ವಿಶ್ವ ಮಹಿಳಾ ದಿನಾಚರಣೆಯಾದ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು “ನಾರಿ ಶಕ್ತಿ” ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಹನ ನಡೆಸಲಿದ್ದಾರೆ. ಅಲ್ಲದೇ ನಾಳೆ, ಮೋದಿ ಅವರ ಟ್ವಿಟ್ಟರ್ ಖಾತೆಯನ್ನು ಮಹಿಳಾ ಸಾಧಕರು ನಿರ್ವಹಿಸಲಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಭಾನುವಾರ ಬೆಳಿಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು “ನಾರಿ ಶಕ್ತಿ” ಪ್ರಶಸ್ತಿಗಳನ್ನು ನೀಡಿದ ನಂತರ ಸಂವಾದ ನಡೆಯಲಿದೆ.
“ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳಾ ಸಾಧಕರು ಪ್ರಧಾನಮಂತ್ರಿಯ ಟ್ವಿಟ್ಟರ್ ಖಾತೆಯನ್ನು ನಿರ್ವಹಿಸಲಿದ್ದಾರೆ” ಎಂದು ಶನಿವಾರ ಹೇಳಿಕೆಯಲ್ಲಿ ಪ್ರಧಾನಮಂತ್ರಿ ಸಚಿವಾಲಯ ತಿಳಿಸಿದೆ.
ಮಹಿಳಾ ಸಬಲೀಕರಣದ ಕಾರಣಕ್ಕಾಗಿ, ವಿಶೇಷವಾಗಿ ದುರ್ಬಲ ಮತ್ತು ಹಿಂದುಳಿದ ವರ್ಗದ ಮಹಿಳೆಯರ ಸಬಲೀಕರಣಕ್ಕಾಗಿ ಅಸಾಧಾರಣ ಕಾರ್ಯವನ್ನು ಮಾಡಿದ ವ್ಯಕ್ತಿಗಳು, ಗುಂಪುಗಳು, ಸಂಸ್ಥೆಗಳನ್ನು ಗುರುತಿಸಿ “ನಾರಿ ಶಕ್ತಿ” ಪ್ರಶಸ್ತಿಗಳನ್ನು ವಾರ್ಷಿಕವಾಗಿ ನೀಡಲಾಗುತ್ತದೆ.
ಸ್ಫೂರ್ತಿ ನೀಡುವ ಮಹಿಳೆಯರಿಗೆ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳ ನಿರ್ವಹಣೆಯ ಜವಾಬ್ದಾರಿಯನ್ನು ನೀಡುವುದಾಗಿ ಭಾನುವಾರ ಹಸ್ತಾಂತರಿಸುವುದಾಗಿ ಮೋದಿ ಮಂಗಳವಾರ ಘೋಷಿಸಿದ್ದರು.
“ಈ ಮಹಿಳಾ ದಿನಾಚರಣೆ (ಮಾರ್ಚ್ 8)ಯಂದು, ನನ್ನ ಸಾಮಾಜಿಕ ಜಾಲತಾಣ ಖಾತೆಗಳನ್ನು ತಮ್ಮ ಜೀವನ ಮತ್ತು ಕೆಲಸದ ಮೂಲಕ ನಮಗೆ ಸ್ಫೂರ್ತಿ ನೀಡುವ ಮಹಿಳೆಯರಿಗೆ ನೀಡುತ್ತೇನೆ. ಇದು ಲಕ್ಷಾಂತರ ಪ್ರೇರಣೆಯನ್ನು ನೀಡಲು ಸಹಾಯ ಮಾಡುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದರು.
ಪ್ರಧಾನ ಮಂತ್ರಿ ಫೇಸ್ಬುಕ್, ಟ್ವಿಟರ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ಖಾತೆಗಳನ್ನು ಹೊಂದಿದ್ದಾರೆ.
ಟ್ವಿಟರ್ನಲ್ಲಿ 53.3 ಮಿಲಿಯನ್, ಫೇಸ್ಬುಕ್ನಲ್ಲಿ 44 ಮಿಲಿಯನ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ 35.2 ಮಿಲಿಯನ್ ಫಾಲೋವರ್ಸ್ ಹೊಂದಿರುವ ಅವರು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ವಿಶ್ವ ನಾಯಕರಲ್ಲಿ ಒಬ್ಬರು.
ಪ್ರಧಾನ ಮಂತ್ರಿ ಕಚೇರಿಯ ಟ್ವಿಟರ್ ಹ್ಯಾಂಡಲ್ 32 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.