ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ದಿಗ್ಗಜ ಆಟಗಾರ್ತಿ, 2018ರ ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಭಾರತವನ್ನು ಮುನ್ನಡೆಸಿದ ಮಿಥಾಲಿ ರಾಜ್ ಅವರು ಸೀರೆಯುಟ್ಟು ಬ್ಯಾಟಿಂಗ್ ಮಾಡುವ ಮೂಲಕ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಅವರು ಭಾರತದ ಸಾಂಪ್ರದಾಯಿಕ ಉಡುಗೆ ಉಟ್ಟು ಬ್ಯಾಟ್ ಬೀಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ಟಿ-20ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿರುವ ಭಾರತೀಯ ಮಹಿಳಾ ತಂಡಕ್ಕೆ ಅವರು ವೀಡಿಯೋ ಮೂಲಕ ಮಹತ್ವದ ಸಂದೇಶವನ್ನು ಸಾರಿದ್ದು, “ನೀವು ಕೂಡ ಮಾಡಬಲ್ಲಿರಿ ಎಂಬುದನ್ನು ಜಗತ್ತಿಗೆ ತೋರಿಸಿಕೊಡಿ. ಕಂಮಾನ್ ಟೀಮ್ ಇಂಡಿಯಾ, ಭಾರತಕ್ಕೆ ಟ್ರೋಫಿ ತನ್ನಿ” ಎಂದು ಮಿಥಾಲಿ ಹೇಳಿದ್ದಾರೆ.
View this post on Instagram
ಇಂದು ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಅವರು ಭಾರತೀಯ ಮಹಿಳಾ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಮಹಿಳಾ ದಿನಾಚರಣೆಯ ಪ್ರಯುಕ್ತ ಮಿಥಾಲಿ ಅವರು ತಮ್ಮ ವಿಡಿಯೋ ಅನ್ನು ಬಿಡುಗಡೆ ಮಾಡಿದ್ದು, ಇದಕ್ಕೆ ‘Be lady, they said’ ಎಂಬ ಒಕ್ಕಣೆಯನ್ನು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.