ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಖೋರಾಸನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ದೆಹಲಿ ಪೊಲೀಸ್ ವಿಶೇಷ ವಿಭಾಗವು ಭಾನುವಾರ ಓಖ್ಲಾದಲ್ಲಿ ಕಾಶ್ಮೀರಿ ದಂಪತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ದಂಪತಿಯನ್ನು ಜಹಂಜೇಬ್ ಸಾಮಿ ಮತ್ತು ಆತನ ಪತ್ನಿ ಹಿಂದಾ ಬಶೀರ್ ಬೇಗ್ ಎಂದು ಗುರುತಿಸಲಾಗಿದೆ. ಪೊಲೀಸರು ದಂಪತಿಯನ್ನು ಅಧಿಕೃತವಾಗಿ ಬಂಧಿಸದಿದ್ದರೂ, ಅವರನ್ನು ವಿಚಾರಣೆಗೊಳಪಡಿಸುತ್ತಿದ್ದಾರೆ. ಅವರಿಂದ ಕೆಲವು ಆಕ್ಷೇಪಾರ್ಹ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಹಂಜೇಬ್ ಸಾಮಿ ಮತ್ತು ಹಿನಾ ಬಶೀರ್ ಬೇಗ್ ಎಂದು ಗುರುತಿಸಲಾಗಿರುವ ಈ ದಂಪತಿ ದೆಹಲಿಯಲ್ಲಿ ಪೌರತ್ವ ವಿರೋಧಿ ಕಾಯ್ದೆ ಪ್ರತಿಭಟನೆಯನ್ನು ಪ್ರಚೋದಿಸುತ್ತಿದ್ದರು ಮತ್ತು ಹಿಂಸಾಚಾರದ ಪರಿಸ್ಥಿತಿಯನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದರು ಎಂದು ದೆಹಲಿ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಮೋದ್ ಸಿಂಗ್ ಕುಶ್ವಾಹಾ ಹೇಳಿದ್ದಾರೆ.
ಗುಪ್ತಚರ ದಳವು ಮಾಹಿತಿಯನ್ನು ಹಂಚಿಕೊಂಡ ನಂತರ ಭಾನುವಾರ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ದಂಪತಿಯನ್ನು ಬಂಧಿಸಲಾಯಿತು. ಇವರ ವಿರುದ್ಧ ಪ್ರಸ್ತುತ ತನಿಖೆಯನ್ನು ನಡೆಸಲಾಗುತ್ತಿದೆ ಮತ್ತು ಹಲವಾರು ಏಜೆನ್ಸಿಗಳು ಅವರನ್ನು ಪ್ರಶ್ನೆಗೊಳಪಡಿಸುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.