ಗುವಾಹಟಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಅವರು ಭಾನುವಾರ ಮಹತ್ವದ ರಸ್ತೆ ನಿರ್ಮಾಣ ಯೋಜನೆಗೆ ಚಾಲನೆಯನ್ನು ನೀಡಿದ್ದಾರೆ. ಈ ರಸ್ತೆ ನಿರ್ಮಾಣ ಯೋಜನೆಯು, ಕೇವಲ 72 ಗಂಟೆಗಳ ಅವಧಿಯಲ್ಲಿ ರಾಜ್ಯದ ಒಂದೇ ಜಿಲ್ಲೆಯಲ್ಲಿ 127 ಕಿಲೋಮೀಟರ್ ಬ್ರಿಕ್ ಸಾಯಿಲಿಂಗ್ ರೋಡ್ ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಮಿಷನ್ ಮೋಡ್ನಲ್ಲಿ ಕಾರ್ಯಗತಗೊಳ್ಳುತ್ತಿರುವ ಯೋಜನೆಯಡಿಯಲ್ಲಿ, ಸರ್ಕಾರವು ಒಟ್ಟು 440 ಬ್ರಿಕ್ ಸಾಯಿಲಿಂಗ್ ರಸ್ತೆಗಳನ್ನು ಪ್ರಾಥಮಿಕವಾಗಿ ರಾಜ್ಯದ ಪಶ್ಚಿಮ ತ್ರಿಪುರ ಜಿಲ್ಲೆಯ ಕುಗ್ರಾಮ ಪ್ರದೇಶಗಳಲ್ಲಿ ನಿರ್ಮಿಸುತ್ತಿದೆ. ರಾಜ್ಯದ ಅನೇಕ ಸಣ್ಣ ಹಳ್ಳಿಗಳು ಇನ್ನಷ್ಟೇ ರಸ್ತೆ ಸಂಪರ್ಕವನ್ನು ಹೊಂದಬೇಕಿದೆ ಎಂಬುದನ್ನು ಅರಿತುಕೊಂಡು ಸಿಎಂ ದೇಬ್ ಅವರು ಕುಗ್ರಾಮ ಭಾಗದಲ್ಲಿ ರಸ್ತೆ ನಿರ್ಮಾಣ ಮಾಡುವ ಯೋಜನೆಗೆ ಚಾಲನೆಯನ್ನು ನೀಡಿದ್ದಾರೆ.
ಭಾರತ ಸರ್ಕಾರದ MGNREGA ಕಾರ್ಯಕ್ರಮದಡಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಯೋಜನೆಯ ಫಲಿತಾಂಶವಾಗಿ, ರಾಜ್ಯ ಸರ್ಕಾರವು 1.5 ಲಕ್ಷ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸುತ್ತದೆ ಮತ್ತು ರಾಜ್ಯದ ಜನರಿಗೆ ಶಾಶ್ವತ ಆಸ್ತಿಗಳನ್ನು ನಿರ್ಮಿಸುತ್ತದೆ.
ಭಾಗಲ್ಪುರ ಗ್ರಾಮ ಪಂಚಾಯಿತಿಯಲ್ಲಿ ಯೋಜನೆಗೆ ಚಾಲನೆಯನ್ನು ನೀಡಿ ಮಾತನಾಡಿದ ಸಿಎಂ ದೇಬ್, ಇದೇ ರೀತಿಯ ರಸ್ತೆ ನಿರ್ಮಾಣ ಕಾರ್ಯಕ್ರಮಗಳನ್ನು ರಾಜ್ಯದ ಇತರ ಜಿಲ್ಲೆಗಳಲ್ಲಿ ಮಿಷನ್ ಮೋಡ್ ಅಡಿಯಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.