ಲಕ್ನೋ: ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಿ ಮತ್ತು ಅವರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿಯನ್ನು ವಹಿಸಿ ಇದರಿಂದ ಅವರು ರಾಷ್ಟ್ರಕ್ಕೆ ಕೊಡಗೆಗಳನ್ನು ನೀಡಲು ಸಾಧ್ಯವಾಗುತ್ತದೆ ಮತ್ತು ಘನತೆಯನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರೆ ನೀಡಿದ್ದಾರೆ.
ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾನಾಡಿದ ಅವರು, “ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಿ ಮತ್ತು ಅವರ ಆರೋಗ್ಯವನ್ನು ನೋಡಿಕೊಳ್ಳಿ. ಮಗಳು ಮತ್ತು ಮಗನ ನಡುವಿನ ತಾರತಮ್ಯವು ಕೊನೆಗೊಂಡಾಗ, ಮಗಳು ನಿಮ್ಮ ಹೆಸರನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದನ್ನು ನೀವು ನೋಡುತ್ತೀರಿ” ಎಂದು ಆದಿತ್ಯನಾಥ್ ಹೇಳಿದ್ದಾರೆ.
ಮಾ.8 ಅನ್ನು ವಿಶ್ವದಾದ್ಯಂತ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಹಿಳೆಯರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಹಿಳೆಯರ ಸಬಲೀಕರಣದ ಧ್ಯೇಯದೊಂದಿಗೆ, ಲಿಂಗ ತಾರತಮ್ಯವನ್ನು ಕೊನೆಗೊಳಿಸುವ ಬದ್ಧತೆಯೊಂದಿಗೆ ಮಹಿಳಾ ದಿನವನ್ನು ಆಚರಣೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.