ನವದೆಹಲಿ: ಇಂದು ದೇಶದಲ್ಲಿ ಹೋಳಿ ಹಬ್ಬ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಮೋದಿ, “ಬಣ್ಣ, ಸಂತೋಷ ಮತ್ತು ಉತ್ಸಾಹದ ಹಬ್ಬವನ್ನು ಆಚರಿಸುತ್ತಿರುವ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಶುಭಾಶಯಗಳು. ಈ ಹಬ್ಬವು ದೇಶದಾದ್ಯಂತದ ಜನರಿಗೆ ಸಂತೋಷವನ್ನು ತರಲಿ ಎಂದು ಆಶಿಸುತ್ತೇನೆ” ಎಂದಿದ್ದಾರೆ.
रंग, उमंग और आनंद के त्योहार होली की आप सभी को बहुत-बहुत बधाई। यह पर्व सभी देशवासियों के जीवन में खुशियों लेकर आए। pic.twitter.com/xfrfdNaduX
— Narendra Modi (@narendramodi) March 10, 2020
ಪ್ರಧಾನಿ ನರೇಂದ್ರ ಮೋದಿಯವರು ಕೊರೋನವೈರಸ್ ಭೀತಿಯ ಹಿನ್ನೆಲೆಯಲ್ಲಿ ಈ ಬಾರಿಯ ಹೋಳಿ ಮಿಲನ್ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ್ದಾರೆ.
“ಕರೋನವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಮೂಹಿಕ ಸಮಾರಂಭಗಳನ್ನು ಆದಷ್ಟು ತಡೆಗಟ್ಟಿ ಎಂದು ವಿಶ್ವದಾದ್ಯಂತದ ತಜ್ಞರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಈ ಬಾರಿಯ ಹೋಳಿ ಮಿಲನ್ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ”ಎಂದು ಮೋದಿ ಟ್ವೀಟ್ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.