ನವದೆಹಲಿ: ಭವಿಷ್ಯದಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಮಹಿಳಾ ಕ್ರೀಡಾಪಟುಗಳು ದೇಶಕ್ಕಾಗಿ ಪದಕಗಳನ್ನು ಗೆಲ್ಲಲಿದ್ದಾರೆ ಎಂದು ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅಭಿಪ್ರಾಯಪಟ್ಟಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಸಿಂಧು ಇತ್ತೀಚೆಗೆ 2019 ರ ಬಿಬಿಸಿ ಭಾರತೀಯ ಮಹಿಳಾ ಕ್ರೀಡಾಪಟು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
“ಮಹಿಳೆಯರಾದ ನಾವು ನಮ್ಮನ್ನು ನಂಬಬೇಕು ಎಂಬುದು ಎಲ್ಲಾ ಯುವ ಕ್ರೀಡಾಪಟುಗಳಿಗೆ ನನ್ನ ಸಂದೇಶವಾಗಿದೆ. ಶೀಘ್ರದಲ್ಲೇ ದೇಶಕ್ಕಾಗಿ ಹೆಚ್ಚಿನ ಭಾರತೀಯ ಕ್ರೀಡಾಪಟುಗಳು ಪದಕಗಳನ್ನು ಗೆಲ್ಲುತ್ತಾರೆ ಎಂಬ ಬಗ್ಗೆ ನನಗೆ ಭರವಸೆ ಇದೆ”ಎಂದು ಸಿಂಧು ಅವರು ಅಂತರರಾಷ್ಟ್ರೀಯ ಮಹಿಳಾ ದಿನದಂದು ಪ್ರಶಸ್ತಿ ಗೆದ್ದ ನಂತರ ಹೇಳಿದ್ದಾರೆ.
“ಕಠಿಣ ಪರಿಶ್ರಮವೇ ಯಶಸ್ಸಿನ ಕೀಲಿಯಾಗಿದೆ” ಎಂದು ಪುನರುಚ್ಛರಿಸಿದ್ದಾರೆ.
“ಈ ಪ್ರಶಸ್ತಿಯನ್ನು ನನ್ನ ಬೆಂಬಲಿಗರು ಮತ್ತು ಅಭಿಮಾನಿಗಳಿಗೆ ಅರ್ಪಿಸಲು ನಾನು ಬಯಸುತ್ತೇನೆ. ವರ್ಷದ ಬಿಬಿಸಿ ಇಂಡಿಯನ್ ಸ್ಪೋರ್ಟ್ಸ್ ವುಮನ್ನಂತಹ ಪ್ರಶಸ್ತಿಗಳು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲು ನಮಗೆ ಪ್ರೇರಣೆ ಮತ್ತು ಪ್ರೋತ್ಸಾಹವನ್ನು ನೀಡುತ್ತದೆ” ಎಂದಿದ್ದಾರೆ.
ಸಿಂಧು ಐದು ವಿಶ್ವ ಚಾಂಪಿಯನ್ಶಿಪ್ ಪದಕಗಳನ್ನು ಗೆದ್ದ ಕೀರ್ತಿಗೆ ಪಾತ್ರರಾಗಿದ್ದಾರೆ. ಒಲಿಂಪಿಕ್ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಸಿಂಗಲ್ಸ್ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಸಿಂಧು 2012ರ ಸೆಪ್ಟೆಂಬರ್ನಲ್ಲಿ ಕೇವಲ 17 ನೇ ವಯಸ್ಸಿನಲ್ಲಿ ಬಿಡಬ್ಲ್ಯುಎಫ್ ವಿಶ್ವ ಶ್ರೇಯಾಂಕದಲ್ಲಿ ಅಗ್ರ 20ರಲ್ಲಿ ಸ್ಥಾನ ಪಡೆದರು. ಕಳೆದ ನಾಲ್ಕು ವರ್ಷಗಳಲ್ಲಿ ಅವರು ಅಗ್ರ 10ರಲ್ಲಿ ಉಳಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.