ದೆಹಲಿ: ದೆಹಲಿಯನ್ನೇ ಹೊತ್ತಿ ಉರಿಯುವಂತೆ ಮಾಡಿದ್ದ, ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ದಂಗೆ ನಡೆಸಲು ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಎಎಪಿಯಿಂದ ಉಚ್ಛಾಟನೆಗೊಂಡ ತಾಹಿರ್ ಹುಸೇನ್ ಮತ್ತು ಪಿಎಫ್ಐ ವಿರುದ್ಧ ಪ್ರಕರಣ ದಾಖಲಾಗಿದೆ.
ಅಕ್ರಮ ಹಣಕಾಸು ವ್ಯವಹಾರದಲ್ಲಿ ಗುರುತಿಸಿಕೊಂಡಿರುವ ಅರೋಪದ ಮೇಲೆ ತಾಹಿರ್ನನ್ನು ಈ ಹಿಂದೆ ಎಎಪಿ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇದೀಗ ಪ್ರತಿಭಟನೆ ನಡೆಸಲು ಹಣಕಾಸಿನ ನೆರವು ನೀಡಿದ ಆರೋಪವೂ ತಾಹಿರ್ ಮೇಲೆ ದಾಖಲಾಗಿದೆ. ಜೊತೆಗೆ ಪಿಎಫ್ಐ ಸಂಘಟನೆ ಮತ್ತು ಇನ್ನೂ ಕೆಲವರ ವಿರುದ್ಧವೂ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿಯ ಸಂದರ್ಭದಲ್ಲಿ ದೆಹಲಿಯಲ್ಲಿ ದಂಗೆ ಆರಂಭವಾಗಲು ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟ ಹಿನ್ನೆಯಲ್ಲಿ ತಾಹಿರ್ ಜೈಲು ಪಾಲಾಗಿದ್ದಾನೆ. ಅಲ್ಲದೆ ಮನೆಯಲ್ಲಿ ಪೆಟ್ರೋಲ್ ಬಾಂಬ್ ಸಂಗ್ರಹಿಸಿಟ್ಟಿದ್ದ ಬಗ್ಗೆಯೂ ತಾಹಿರ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ದಂಗೆಯ ಸಂದರ್ಭದಲ್ಲಿ ಗುಪ್ತಚರ ಅಧಿಕಾರಿ ಅಂಕಿತ್ ಶರ್ಮಾ ಸೇರಿದಂತೆ ಕೆಲವು ಪೊಲೀಸರು ಮತ್ತು ಜನಸಾಮಾನ್ಯರು ಸಾವಿಗೀಡಾಗಿದ್ದರು. ಅಲ್ಲದೆ ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಆಸ್ತಿ ಪಾಸ್ತಿಗಳನ್ನು ಧ್ವಂಸ ಮಾಡಲಾಗಿತ್ತು, ಇದರಿಂದ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು.
ಇದೀಗ ದಂಗೆಗೆ ಆರ್ಥಿಕ ನೆರವು ನೀಡಿರುವ ವಿಚಾರದಲ್ಲಿ ತಾಹಿರ್ನನ್ನು ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿ ಸುಪರ್ದಿಗೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.