ನವದೆಹಲಿ: ದೇಶದಲ್ಲಿ ಕೊರೋನವೈರಸ್ ಪ್ರಕರಣಗಳು ತೀವ್ರವಾಗಿ ಏರುತ್ತಿರುವುದರಿಂದ ಭಾರತಕ್ಕೆ ಬರುವ ಎಲ್ಲಾ ವೀಸಾಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಎಪ್ರಿಲ್ 15 ರ ವರೆಗೆ ಟೂರಿಸ್ಟ್ ವೀಸಾಗಳು ರದ್ದುಗೊಂಡಿವೆ. ಕೊರೋನವೈರಸ್ ಅನ್ನು ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ಸಾಂಕ್ರಾಮಿಕ ರೋಗವೆಂದು ಘೋಷಿಸಿದೆ.
ಒಟ್ಟಾರೆಯಾಗಿ, ಭಾರತದಲ್ಲಿ 67 ಜನರು ಸೋಂಕಿಗೆ ಒಳಗಾಗಿದ್ದಾರೆ, ಇಟಲಿಯ ಪ್ರವಾಸಿಗರ ಗುಂಪು ಕೂಡ ಇದರಲ್ಲಿ ಸೇರಿದೆ. ರಾಜತಾಂತ್ರಿಕ, ಅಧಿಕೃತ, ಯುಎನ್ / ಅಂತರರಾಷ್ಟ್ರೀಯ ಸಂಸ್ಥೆಗಳು, ಉದ್ಯೋಗ ಮತ್ತು ಯೋಜನಾ ವೀಸಾಗಳನ್ನು ಹೊರತುಪಡಿಸಿ ಅಸ್ತಿತ್ವದಲ್ಲಿರುವ ಎಲ್ಲಾ ವೀಸಾಗಳನ್ನು ಏಪ್ರಿಲ್ 15 ರವರೆಗೆ ಅಮಾನತುಗೊಳಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
“ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನೇತೃತ್ವದ ಸಚಿವರುಗಳ ಗುಂಪಿನ ಸಭೆಯ ನಂತರ ಬುಧವಾರ ತಡರಾತ್ರಿ ಹೇಳಿಕೆಯನ್ನು ಹೊರಡಿಸಲಾಗಿದೆ. COVID-19 ಪೀಡಿತ ರಾಷ್ಟ್ರಗಳ ವೀಸಾ ಸೌಲಭ್ಯಗಳನ್ನು ಭಾಗಶಃ ಅಮಾನತುಗೊಳಿಸಲಾಗಿದೆ” ಎಂದಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಕೊರೋನವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದೆ, ಇದರರ್ಥ ಪ್ರಪಂಚದಾದ್ಯಂತ ಹರಡಿರುವ ಮತ್ತು ಅಪಾರ ಸಂಖ್ಯೆಯ ಜನರ ಮೇಲೆ ಪರಿಣಾಮ ಬೀರುವ ರೋಗ ಎಂಬುದಾಗಿದೆ.
ಭಾರತದಲ್ಲಿ ಒಟ್ಟು ದೃಢಪಡಿಸಿದ ಕೊರೋನವೈರಸ್ ಪ್ರಕರಣಗಳ ಸಂಖ್ಯೆ ಈಗ 67 ಕ್ಕೆ ಏರಿದೆ. ಮಹಾರಾಷ್ಟ್ರ, ರಾಜಸ್ಥಾನ, ಕೇರಳ ಮತ್ತು ಕರ್ನಾಟಕದಲ್ಲಿ ಹೊಸ ಪ್ರಕರಣಗಳು ವರದಿಯಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.