ನವದೆಹಲಿ : ಬಿಜೆಪಿಗೆ ಸೇರ್ಪಡೆಗೊಂಡಿರುವ ಮಾಜಿ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬಿಜೆಪಿ ಒಟ್ಟು 11 ಅಭ್ಯರ್ಥಿಗಳ ಪಟ್ಟಿಯನ್ನು ನಿನ್ನೆ ಬಿಡುಗಡೆಗೊಳಿಸಿದ್ದು, ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಪಕ್ಷ ಸಿಂಧಿಯಾ ಅವರನ್ನು ನಾಮನಿರ್ದೇಶನ ಮಾಡಿದೆ.
ತನ್ನ 11 ಅಭ್ಯರ್ಥಿಗಳಲ್ಲದೆ, ಬಿಜೆಪಿ ತನ್ನ ಮಿತ್ರಪಕ್ಷಗಳಿಗೆ ಎರಡು ಸ್ಥಾನಗಳನ್ನು ನೀಡಿದೆ.
ಜಾರ್ಖಂಡ್ನ ಬಿಜೆಪಿ ರಾಜ್ಯಾಧ್ಯಕ್ಷ ದೀಪಕ್ ಪ್ರಕಾಶ್ ಮತ್ತು ಗುಜರಾತ್ನ ರಾಮಿಲಾಬೆನ್ ಬಾರಾ ಮತ್ತು ಅಭಯ್ ಭಾರದ್ವಾಜ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಹಾರಾಷ್ಟ್ರದಿಂದ ಬಿಜೆಪಿಯ ಉದಯನ್ ರಾಜ್ ಭೋಸಲೆ ಅವರನ್ನು ಕಣಕ್ಕಿಳಿಸಿದೆ ಮತ್ತು ಎನ್ಡಿಎ ಮೈತ್ರಿ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಎ ಮುಖ್ಯಸ್ಥ ರಾಮದಾಸ್ ಅಠಾವಾಲೆ ಅವರನ್ನು ಬೆಂಬಲಿಸಲಿದೆ.
ವಿವೇಕ್ ಠಾಕೂರ್ ಬಿಹಾರದ ಅಭ್ಯರ್ಥಿಯಾಗಿದ್ದರೆ, ಅಸ್ಸಾಂನಿಂದ ಪಕ್ಷವು ಮಿತ್ರ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ನಾಯಕ ಬಿಸ್ವಾಜಿತ್ ಡೈಮರಿಯನ್ನು ಬೆಂಬಲಿಸಿದೆ, ಪಕ್ಷದ ನಾಯಕ ಭುವನೇಶ್ವರ ಕಲಿತಾ ಅವರನ್ನು ಕಣಕ್ಕಿಳಿಸುತ್ತಿದೆ. ರಾಜೇಂದ್ರ ಗೆಹ್ಲೋಟ್ ರಾಜಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಹಿರಿಯ ಸಚಿವರು ಮತ್ತು ಮುಖಂಡರು ಕೂಡ ಭಾಗಿಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.