ನವದೆಹಲಿ: ಕೊರೋನವೈರಸ್ ಮಹಾಮಾರಿಯಂತೆ ವಿಶ್ವವನ್ನು ಆಕ್ರಮಿಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಇದನ್ನು ಬುಧವಾರ ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿದೆ. ಈ ವೈರಸ್ ಹರಡುವಿಕೆ ತಡೆಗಟ್ಟುವಲ್ಲಿನ ನಿಷ್ಕ್ರಿಯತೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ.
ಕಳೆದ ಎರಡು ವಾರಗಳಲ್ಲಿ ಚೀನಾದ ಹೊರಗೆ ಕೊರೋನವೈರಸ್ ಪ್ರಕರಣಗಳ ಸಂಖ್ಯೆ 13 ಪಟ್ಟು ಹೆಚ್ಚಾಗಿದೆ ಎಂದು ಡಬ್ಲ್ಯುಎಚ್ಒ ಮುಖ್ಯಸ್ಥ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.
ಕೊರೋನವೈರಸ್ ಅನ್ನು ಸಾಂಕ್ರಾಮಿಕ ಅಥವಾ ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಏಕಕಾಲದಲ್ಲಿ ಹರಡುತ್ತಿರು ರೋಗ ಎಂದು ಘೋಷಣೆ ಮಾಡಿರುವುದು, ದೇಶಗಳು ಏನು ಮಾಡಬೇಕೆಂಬುದರ ಬಗ್ಗೆ WHO ನೀಡಿದ ಸಲಹೆಯಲ್ಲಿ ಬದಲಾವಣೆಯಾಗುತ್ತಿದೆ ಎಂದು ಅರ್ಥವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
“ತುರ್ತು ಮತ್ತು ಆಕ್ರಮಣಕಾರಿ ಕ್ರಮ”ವನ್ನು ತೆಗೆದುಕೊಳ್ಳುವ ಮೂಲಕ ಈ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಕ್ರಮಕೈಗೊಳ್ಳಬೇಕೆಂದು ಅವರು ಕರೆ ನೀಡಿದರು.
ಈ ವೈರಸ್ ಅನ್ನು ನಿಗ್ರಹಿಸಬಹುದು ಮತ್ತು ನಿಯಂತ್ರಿಸಬಹುದು ಎಂದು ಹಲವಾರು ದೇಶಗಳು ತೋರಿಸಿಕೊಟ್ಟಿವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.