ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೆಲೆಟ್ ಗನ್ ಬಳಕೆಯನ್ನು ನಿಷೇಧಿಸಲು ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯ ಸಾಮರ್ಥ್ಯಕ್ಕೆ ಪ್ರಮುಖ ಉತ್ತೇಜನ ಸಿಕ್ಕಿದೆ. ಕಣಿವೆಯಲ್ಲಿ ಹಿಂಸಾತ್ಮಕ ಜನಸಮೂಹದ ಕಲ್ಲು ತೂರಾಟಗಳನ್ನು ಚದುರಿಸಲು ಭದ್ರತಾ ಪಡೆಗಳು ಪೆಲೆಟ್ ಬಂದೂಕುಗಳನ್ನು ಬಳಸುತ್ತವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಸುವುದರ ವಿರುದ್ಧ 2016 ರಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಯಿತು. ಅರ್ಜಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ನಲ್ಲಿ ಪೆಲೆಟ್ ಗನ್ ಬಳಕೆಯನ್ನು ನಿಷೇಧಿಸುವಂತೆ ಕೋರಲಾಗಿತ್ತು. ಬುಧವಾರ ಇದೇ ಅರ್ಜಿಯನ್ನು ಆಲಿಸಿದ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೆಲೆಟ್ ಬಂದೂಕುಗಳನ್ನು ನಿಷೇಧಿಸಲು ನಿರಾಕರಿಸಿದೆ.
ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನ ನ್ಯಾಯಮೂರ್ತಿ ಅಲಿ ಮೊಹಮ್ಮದ್ ಮಾಗರೆ ಮತ್ತು ನ್ಯಾಯಮೂರ್ತಿ ಧೀರಜ್ ಸಿಂಗ್ ಠಾಕೂರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ಆಕ್ರಮಣ ಅಥವಾ ಹಿಂಸಾಚಾರ ಸಂಭವಿಸಿದಾಗ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ಶಸ್ತ್ರಾಸ್ತ್ರ ಅಥವಾ ವಿಧಾನವನ್ನು ಬಳಸುವ ನಿರ್ಧಾರವನ್ನು ಭದ್ರತಾ ಪಡೆಗಳಿಗೆ ಬಿಟ್ಟುಕೊಡಬೇಕು. ಸಮರ್ಥ ಪ್ರಾಧಿಕಾರದ ಸರಿಯಾದ ತನಿಖೆ ಇಲ್ಲದೆ, ಯಾವುದೇ ನಿರ್ದಿಷ್ಟ ಘಟನೆಯಲ್ಲಿ ಅತಿಯಾದ ಬಲವನ್ನು ಬಳಸಲಾಗಿದೆಯೇ ಎಂದು ನ್ಯಾಯಾಲಯ ನಿರ್ಧರಿಸಲು ಸಾಧ್ಯವಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.
ಪೆಲೆಟ್ ಗನ್ಗಳ ಬದಲಿಗೆ ಬೇರೆ ಯಾವುದೇ ಆಯ್ಕೆಯನ್ನು ಬಳಸಿಕೊಳ್ಳುವ ಸಾಧ್ಯತೆಯ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಈಗಾಗಲೇ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ನ್ಯಾಯಾಲಯವು ವಿಚಾರಣೆಯ ಸಮಯದಲ್ಲಿ ಗಮನಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಕ್ರಮಗಳನ್ನು ಕೈಗೊಂಡಾಗ, ಕಠಿಣ ಸಂದರ್ಭಗಳನ್ನು ನಿಭಾಯಿಸಲು ಅಗತ್ಯವಿರುವ ಪೆಲೆಟ್ ಗನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದಿದೆ.
ನ್ಯಾಯಾಲಯದ ಈ ನಿರ್ಧಾರವು ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರತಾ ಪಡೆಗಳಿಗೆ ಹೆಚ್ಚಿನ ಸಮಾಧಾನ ತಂದಿದೆ ಎಂದು ಭದ್ರತಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರತಿಭಟನೆಗಳು ಮತ್ತು ಕಲ್ಲು ತೂರಾಟದ ಘಟನೆಗಳಲ್ಲಿ ಹಿಂಸಾತ್ಮಕ ಪ್ರತಿಭಟನಾಕಾರರನ್ನು ತಡೆಯಲು ಪೆಲೆಟ್ ಗನ್ ತುಂಬಾ ಅಗತ್ಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.