ನವದೆಹಲಿ: 1 ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಮಹಿಳೆಯರಿಗಾಗಿ ಗುಲಾಬಿ ಬಸ್ಗಳನ್ನು ಪರಿಚಯಿಸುವ ಪ್ರಸ್ತಾಪವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮುಂದಿಟ್ಟಿದ್ದಾರೆ.
ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಗುಲಾಬಿ ಬಸ್ಗಳಲ್ಲಿ ಚಾಲಕ, ಕಂಡಕ್ಟರ್ ಮತ್ತು ಪ್ರಯಾಣಿಕರೆಲ್ಲರೂ ಮಹಿಳೆಯರೇ ಆಗಿರುತ್ತಾರೆ ಎಂದು ಹೇಳಿದ್ದಾರೆ.
ಕೆಲವು ನಗರಗಳು ಈಗಾಗಲೇ ಈ ಸೇವೆಯನ್ನು ಪರಿಚಯಿಸಿವೆ ಮತ್ತು ಇದು ಯಶಸ್ವಿಯಾಗಿ ಚಾಲನೆಯಲ್ಲಿದೆ ಎಂದು ಅವರು ಹೇಳಿದರು.
ಈ ಹೊಸ ಗುಲಾಬಿ ಬಸ್ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಸಿಸಿಟಿವಿ ಕ್ಯಾಮೆರಾ ಇರಬೇಕು ಎಂದು ತಯಾರಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ದೆಹಲಿಯಲ್ಲಿ ಇದೇ ರೀತಿಯ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ”ಎಲ್ಲಾ ಹೊಸ ಸಾರ್ವಜನಿಕ ಸಾರಿಗೆ ಬಸ್ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಸಿಸಿಟಿವಿ ಕ್ಯಾಮೆರಾಗಳಿವೆ. ಎಲೆಕ್ಟ್ರಿಕ್ ದ್ವಿ ಮತ್ತು ತ್ರಿಚಕ್ರ ವಾಹನಗಳಿಗೆ ಪರವಾನಗಿಗಳಿಂದ ವಿನಾಯಿತಿ ನೀಡಬೇಕು ಎಂದು ರಾಜ್ಯಗಳಿಗೆ ತಮ್ಮ ಸಚಿವಾಲಯವು ಸಲಹೆ ನೀಡಿದೆ” ಎಂದಿದ್ದಾರೆ.
ಎರಡು ಮತ್ತು ಮೂರು ಇ-ವ್ಹೀಲರ್ಗಳನ್ನು ಮಹಿಳಾ ಪ್ರಯಾಣಿಕರನ್ನು ಕರೆದೊಯ್ಯಲು ಮಹಿಳೆಯರು ಬಳಸಬಹುದು ಮತ್ತು ಇದು ಉದ್ಯೋಗ ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.