ನವದೆಹಲಿ: ಕೊರೋನವೈರಸ್ನಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆ ಸರ್ಕಾರ ಸಂಪೂರ್ಣ ಜಾಗರೂಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಕೊರೋನವೈರಸ್ ಬಗ್ಗೆ ಜನರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗಬಾರದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನರೇಂದ್ರ ಮೋದಿ ಇಂದು ಟ್ವಿಟ್ ಮೂಲಕ ದೇಶದ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.
“ಆತಂಕಕ್ಕೆ ನೋ ಎಂದು ಬಿಡಿ ಮತ್ತು ಮುಂಜಾಗ್ರತಾ ಕ್ರಮಗಳಿಗೆ ಎಸ್ ಎಂದು ಬಿಡಿ” ಎಂದಿದ್ದಾರೆ.
ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರದ ಯಾವುದೇ ಸಚಿವರು ವಿದೇಶ ಪ್ರವಾಸ ಮಾಡುವುದಿಲ್ಲ. ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಿಕೊಳ್ಳಿ ಎಂಬುದಾಗಿ ದೇಶವಾಸಿಗಳಿಗೆ ನಾನು ಮನವಿ ಮಾಡುತ್ತೇನೆ”ಎಂದು ಪ್ರಧಾನಿ ಮೋದಿ ಟ್ವಿಟ್ಟರ್ನಲ್ಲಿ ಹೇಳಿದ್ದಾರೆ.
”ಕೊರೋನವೈರಸ್ ಪರಿಸ್ಥಿತಿಯ ಬಗ್ಗೆ ಸರ್ಕಾರ ಸಂಪೂರ್ಣ ಜಾಗರೂಕವಾಗಿದೆ. ಜನರ ಸುರಕ್ಷತೆಗಾಗಿ ಕೇಂದ್ರ ಸಚಿವಾಲಯ, ರಾಜ್ಯ ಸರ್ಕಾರಗಳು ಹಲವಾರು ಮುಂಜಾಗ್ರತಾ ಕ್ರಮಗಳನ್ನೂ ತೆಗೆದುಕೊಂಡಿವೆ. ವೀಸಾಗಳ ಅಮಾನತಿನಿಂದ ಹಿಡಿದು ಆರೋಗ್ಯ ಸೇವೆ ಸಾಮರ್ಥ್ಯಗಳನ್ನು ಹೆಚ್ಚಿಸುವವರೆಗೆ ಅನೇಕ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೇಂದ್ರದ ಯಾವುದೇ ಸಚಿವರೂ ವಿದೇಶಿ ಪ್ರವಾಸ ಮಾಡುವುದಿಲ್ಲ. ಅದರಂತೆ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ವಿದೇಶಗಳಿಗೆ ತೆರಳುವುದನ್ನು ಕಡಿಮೆ ಮಾಡಿ ಎಂಬುದು ಸಾರ್ವಜನಿಕರಿಗೆ ನಮ್ಮ ಮನವಿ. ದೊಡ್ಡ ಮಟ್ಟದ ಸಭೆ ಸಮಾರಂಭಗಳಲ್ಲಿ ಭಾಗಿಯಾಗದೇ ಇರುವ ಮೂಲಕ ವೈರಸ್ ಹರಡುವುದನ್ನು ತಡೆಯೋಣ. ಆತಂಕವನ್ನು ದೂರ ಮಾಡಿ, ಮುಂಜಾಗ್ರತೆಯನ್ನು ತೆಗೆದುಕೊಳ್ಳೋಣ” ಎಂದು ಮೋದಿ ಹೇಳಿದ್ದಾರೆ.
Say No to Panic, Say Yes to Precautions.
No Minister of the Central Government will travel abroad in the upcoming days. I urge our countrymen to also avoid non-essential travel.
We can break the chain of spread and ensure safety of all by avoiding large gatherings.
— Narendra Modi (@narendramodi) March 12, 2020
The Government is fully vigilant about the situation due to COVID-19 Novel Coronavirus .
Across ministries & states, multiple steps have been proactively taken to ensure safety of all.
These steps are wide-ranging, from suspension of Visas to augmenting healthcare capacities.
— Narendra Modi (@narendramodi) March 12, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.