ಬೆಂಗಳೂರು : ಉತ್ತರ ಕರ್ನಾಟಕದ ಕಲಬುರ್ಗಿ ಜಿಲ್ಲೆಯಲ್ಲಿ ಮಂಗಳವಾರ ನಿಧನರಾದ 76 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೋನವೈರಸ್ ಇತ್ತು ಎಂಬುದನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ಗುರುವಾರ ತಡರಾತ್ರಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಇದು ಭಾರತದಲ್ಲಿ ಕೊರೋನವೈರಸ್ಗೆ ಸಂಬಂಧಿಸಿದ ಸಾವಿನ ಮೊದಲ ಪ್ರಕರಣವಾಗಿದೆ.
ಸಾವಿಗೀಡಾದ ವ್ಯಕ್ತಿಯು ಫೆಬ್ರವರಿ 29 ರಂದು ಸೌದಿ ಅರೇಬಿಯಾದಲ್ಲಿ ಒಂದು ತಿಂಗಳ ಕಾಲ ತಂಗಿದ್ದು ನಂತರ ಭಾರತಕ್ಕೆ ಮರಳಿದ್ದರು. ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ವೇಳೆ ಅವರನ್ನು ಪರೀಕ್ಷಿಸಲಾಯಿತು. ಆ ಸಮಯದಲ್ಲಿ ಅವರಿಗೆ ಯಾವುದೇ ರೋಗಲಕ್ಷಣಗಳನ್ನು ಕಾಣಿಸಿರಲಿಲ್ಲ.
ಮಾರ್ಚ್ 5 ರಂದು ವ್ಯಕ್ತಿಯು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ, ಮರುದಿನವೇ ಅವರು ಜ್ವರ ಮತ್ತು ಕೆಮ್ಮು ಉಲ್ಬಣಗೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಅಸ್ತಮಾ, ಅಧಿಕ ರಕ್ತದ ಒತ್ತಡದಂತಹ ಬೇರೆ ಆರೋಗ್ಯದ ಸಮಸ್ಯೆಗಳೂ ಇತ್ತು. ಮೂರು ದಿನಗಳ ಬಳಿಕ ಅವರನ್ನು ಹೈದರಾಬಾದ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಲ್ಲಿ ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಯಿತು.
ಈ ಸಮಯದಲ್ಲಿ, ಪರೀಕ್ಷೆಯ ಫಲಿತಾಂಶಗಳು ಬರುವ ಮೊದಲೇ ಮತ್ತು ವೈದ್ಯಕೀಯ ಸಲಹೆಗೆ ವಿರುದ್ಧವಾಗಿ ವ್ಯಕ್ತಿಯ ಕುಟುಂಬ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಕರೆದುಕೊಂಡು ಹೋಗಿತ್ತು. ಕಲಬುರ್ಗಿ ಉಪ ಆಯುಕ್ತರ ಸೂಚನೆಯಂತೆ, ಆರೋಗ್ಯ ಅಧಿಕಾರಿಗಳು ಗುಲ್ಬರ್ಗಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ರೋಗಿಯನ್ನು ಪ್ರತ್ಯೇಕ ವಾರ್ಡ್ಗೆ ಸೇರಿಸುವಂತೆ ಮನೆಯವರ ಮನವೊಲಿಸಲು ಪ್ರಯತ್ನಿಸಿದರು.
ಆದರೆ ಕುಟುಂಬವು ನಿರಾಕರಿಸಿತ್ತು ಮತ್ತು ಅವರನ್ನು ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಿತು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು ಮತ್ತು ನಂತರ ಬಿಡುಗಡೆ ಮಾಡಲಾಯಿತು. ಬಳಿಕ ಕಲಬುರ್ಗಿಯಲ್ಲಿರುವ ಆಸ್ಪತ್ರೆಗೆ ಮರಳಿ ಕರೆತರುವಾಗ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೀಗ ವ್ಯಕ್ತಿಗೆ ಕೊರೋನವೈರಸ್ ಇರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ ಎಂಬುದಾಗಿ ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಮನೆಯವರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
ಕಲಬುರ್ಗಿಯಲ್ಲಿ ಮೊನ್ನೆ ಮೃತಪಟ್ಟ 76 ವರ್ಷದ #COVID19 ಶಂಕಿತರಿಗೆ ಸೋಂಕು ತಗಲಿದ್ದು ಖಚಿತವಾಗಿದೆ. ಇವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕವಾಗಿರಿಸಿ ನಿಗಾವಹಿಸಲಾಗಿದೆ.
— B Sriramulu (@sriramulubjp) March 12, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.