ಬೆಂಗಳೂರು: ಇಸ್ಫೋಸಿಸ್ ಫೌಂಡೇಶನ್ ಮೂಲಕ ಅನೇಕ ಸಾಮಾಜಿಕ ಸೇವೆಗಳನ್ನು ಮಾಡುತ್ತಾ ಬಂದಿರುವ ಸುಧಾ ಮೂರ್ತಿ, ಕೊರೋನಾ ಸೋಂಕಿತರ ಕಾಳಜಿ ವಹಿಸುವುದಕ್ಕೂ ಮುಂದಾಗಿದ್ದಾರೆ. ಈ ಕುರಿತಾದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದು, ಕೊರೋನ ವಿಷಯದಲ್ಲೂ ಸುಧಾ ಮೂರ್ತಿ ಅವರೂ ಸೇವೆ ಸಲ್ಲಿಸುವುದಾಗಿ ತಿಳಿಸಿದ್ದಾಗಿ ಹೇಳಿದ್ದಾರೆ.
ದೇಶ ವಿದೇಶಗಳಲ್ಲಿಯೂ ವ್ಯಾಪಕವಾಗಿ ಹರಡಿ, ಜನಜೀವನವನ್ನು ಅಸ್ಥಿರಗೊಳಿಸುತ್ತಿರುವ ಮಹಾಮಾರಿ, ಕರ್ನಾಟಕದಲ್ಲಿ ಹರಡದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಅಗತ್ಯ ಕ್ರಮಗಳ ಬಗ್ಗೆಯೂ ಸುಧಾ ಮೂರ್ತಿ ಮಾತುಕತೆ ನಡೆಸಿದ್ದಾಗಿ ಅವರು ತಿಳಿಸಿದ್ದಾರೆ.
ಇನ್ಫೋಸಿಸ್ ಫೌಂಡೇಶನ್ನಿಂದ ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿದ್ದ ಸುಧಾ ಮೂರ್ತಿ ಕೊರೋನ ಎಚ್ಚರಿಕಾ ಕ್ರಮಗಳ ಬಗ್ಗೆ ತೆಗೆದುಕೊಳ್ಳಬಹುದಾದ ತುರ್ತು ಕ್ರಮಗಳ ಬಗ್ಗೆ ಚರ್ಚೆ ನಡೆಸಿರುವುದರ ಜೊತೆಗೆ, ರಾಜ್ಯದಲ್ಲಿ ಒಂದು ಅಸ್ಪತ್ರೆಯನ್ನು ತಮ್ಮ ಸುಪರ್ದಿಗೆ ನೀಡುವಂತೆಯೂ ಕೋರಿಕೊಂಡಿದ್ದಾರೆ. ಅಲ್ಲಿ ಕೊರೋನವೈರಸ್ ಚಿಕಿತ್ಸೆಗೆ ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನೂ ತಮ್ಮ ಫೌಂಡೇಶನ್ನ ವತಿಯಿಂದಲೇ ನೀಡುವುದು ಮತ್ತು ಸೋಂಕಿತ ವ್ಯಕ್ತಿಯ ಚಿಕಿತ್ಸೆಯ ವೆಚ್ಚವನ್ನೂ ತಾವೇ ಭರಿಸುವುದಾಗಿ ತಿಳಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಜೊತೆಗೆ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರೊಂದಿಗೂ ಸುಧಾ ಮೂರ್ತಿ ಚರ್ಚೆ ನಡೆಸಿರುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿಎಸ್ವೈ ಅವರಿಗೂ ಪತ್ರ ಬರೆದಿದ್ದಾರೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಶೀಘ್ರವೇ ಈ ಕುರಿತದಂತೆ ಉನ್ನತ ಮಟ್ಟದ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
ಅಲ್ಲದೆ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಿರುವ ಶಿಕ್ಷಣ ಸಚಿವರ ಕ್ರಮಕ್ಕೂ ಸುಧಾಮೂರ್ತಿ ಮೆಚ್ಚುಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.