ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಅಖಿಲ ಭಾರತೀಯ ಪ್ರತಿನಿಧಿ ಸಭೆ ಬೆಂಗಳೂರಿನಲ್ಲಿ ಮಾರ್ಚ್ 15 ರಿಂದ ಮಾರ್ಚ್ 17 ರ ವರೆಗೆ ಜರುಗಲಿದೆ. ಈಗಾಗಲೇ ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣ್ಯಾತಿಗಣ್ಯರು ಇದರಲ್ಲಿ ಭಾಗಿಯಾಗುತ್ತಿದ್ದಾರೆ.
ಪ್ರಸ್ತುತ ದೇಶದಲ್ಲಿ ಕೊರೋನವೈರಸ್ ದೊಡ್ಡ ಮಟ್ಟದ ಆತಂಕವನ್ನು ಸೃಷ್ಟಿ ಮಾಡಿದೆ. ಕರ್ನಾಟಕದಲ್ಲೂ ಹಲವಾರು ಕಡೆಗಳಲ್ಲಿ ಕೊರೋನವೈರಸ್ ಪ್ರಕರಣಗಳು ಪತ್ತೆಯಾಗಿವೆ. ಈಗಾಗಲೇ ಕಲಬುರ್ಗಿಯಲ್ಲೂ ಒರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಅಖಿಲ ಭಾರತೀಯ ಪ್ರತಿನಿಧಿ ಸಭೆಗೆ ಆಗಮಿಸುತ್ತಿರುವ ಪ್ರತಿಯೊಬ್ಬರನ್ನೂ ಮುಂಜಾಗ್ರತಾ ಕ್ರಮವಾಗಿ ಕಡ್ಡಾಯ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಅಲ್ಲದೇ, ಪ್ರತಿನಿಧಿಗಳಲ್ಲದೇ ಈ ಸಭೆಗೆ ಹೊರಗಿನ ಜನರಿಗೆ ಪಾಲ್ಗೊಳ್ಳುವ ಅವಕಾಶವಿಲ್ಲ. ಆಗಮಿಸುವ ಪ್ರತಿಯೊಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ.
ಪ್ರತಿಯೊಬ್ಬರೂ ಆರೋಗ್ಯ ತಪಾಸಣೆಗೆ ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದ್ದು, ಎಲ್ಲರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಕಡ್ಡಾಯ ನಿಗಾವನ್ನು ವಹಿಸಲಾಗುತ್ತಿದೆ.
ಈ ಸಭೆಯಲ್ಲಿ 1500 ಆರೆಸ್ಸೆಸ್ ನ ಚುನಾಯಿತ ಪ್ರತಿನಿಧಿಗಳು ಹಾಗೂ ವಿಶೇಷ ಆಹ್ವಾನಿತರು ಪಾಲ್ಗೊಳ್ಳುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.