ನವದೆಹಲಿ : ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವದ ಸಂದರ್ಭಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ನಿರ್ಮಿತ ಧ್ವಜಗಳು ಅತಿ ಹೆಚ್ಚು ಸಂಖ್ಯೆಯಲ್ಲಿ ಮಾರಾಟವಾಗುತ್ತವೆ. ಆದರೆ ಮರುದಿನ ಅದೇ ಪ್ಲಾಸ್ಟಿಕ್ ನಿರ್ಮಿತ ಧ್ವಜಗಳು ರಸ್ತೆ, ಚರಂಡಿ, ಎಲ್ಲೆಡೆ ಕಸದಂತೆ ಬಿದ್ದಿದ್ದು, ರಾಷ್ಟ್ರಧ್ವಜಕ್ಕೆ ಅವಮಾನವಾಗುತ್ತಿದೆ ಎಂಬ ದೂರುಗಳು ಹೆಚ್ಚಾಗಿ ಬಂದ ಹಿನ್ನೆಲೆಯಲ್ಲಿ ದೇಶಾದ್ಯಂತ ಶೀಘ್ರದಲ್ಲೇ ಈ ಪ್ಲಾಸ್ಟಿಕ್ ನಿರ್ಮಿತ ರಾಷ್ಟ್ರಧ್ವಜದ ಬಳಕೆ, ಮಾರಾಟ ಮತ್ತು ಖರೀದಿಗಳನ್ನು ನಿಷೇಧಿಸಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ಲಾಸ್ಟಿಕ್ನಿಂದ ಮಾಡುವ ರಾಷ್ಟ್ರಧ್ವಜಗಳ ತಯಾರಿಕೆ, ಬಳಕೆ ಹಾಗೂ ಮಾರಾಟದ ಮೇಲೆ ನಿಷೇಧ ಹೇರುವ ಒಂದು ನೀತಿಯನ್ನು ರೂಪಿಸುವಂತೆ ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಸರ್ಕಾರವೇ ಒಂದು ಸಮಗ್ರ ನೀತಿಯನ್ನು ರೂಪಿಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ತಿಳಿಸಿತ್ತು. ನಿಷೇಧ ಹೇರುವ ಸಮಗ್ರ ನೀತಿ ಸದ್ಯದಲ್ಲೇ ಜಾರಿಗೆ ಬರುವ ಸಂಭವವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.