ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ವೈದ್ಯಕೀಯ ಆರೋಗ್ಯ ಸೌಲಭ್ಯಗಳು ಗಮನಾರ್ಹ ಸುಧಾರಣೆ ಸಾಧಿಸಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ರಿಷಿಕೇಶ್ ಆಯೋಜನೆಗೊಳಿಸಿದ ಸಮಾರಂಭದಲ್ಲಿ ಮಾತನಾಡಿದ ಅವರು, “ಆರು ವರ್ಷಗಳ ಅವಧಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅವಿರತ ಪ್ರಯತ್ನಗಳ ಮೂಲಕ ಸುಮಾರು 130 ಕೋಟಿ ಭಾರತೀಯರನ್ನು ಹೊಂದಿರುವ ದೇಶದ ಆರೋಗ್ಯ ಕ್ಷೇತ್ರವನ್ನು ಗಮನಾರ್ಹವಾಗಿ ಸುಧಾರಿಸಿದ್ದಾರೆ. ದೇಶದ ಮತ್ತು ಜನರ ಆರೋಗ್ಯವನ್ನು ಸುಧಾರಿಸುವ ಬಗ್ಗೆ ಯೋಚಿಸಿದ ಏಕೈಕ ಮೋದಿಯಾಗಿದ್ದಾರೆ” ಎಂದಿದ್ದಾರೆ.
2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ದೇಶಾದ್ಯಂತ 157 ಹೊಸ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.
“ನರೇಂದ್ರ ಮೋದಿ ಪ್ರಧಾನಿಯಾದ ನಂತರ ಸುಮಾರು 157 ಹೊಸ ವೈದ್ಯಕೀಯ ಕಾಲೇಜುಗಳ ಕಾಮಗಾರಿ ನಡೆಯುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ದೇಶದಲ್ಲಿ ಆರು ಏಮ್ಸ್ ರಚಿಸಿದ್ದಾರೆ. ಈಗ ದೇಶದಲ್ಲಿ ಒಟ್ಟು 22 ಏಮ್ಸ್ ಸ್ಥಾಪಿಸಲಾಗುತ್ತಿದೆ. ಪ್ರತಿ ರಾಜ್ಯದಲ್ಲೂ ಏಮ್ಸ್ ಸ್ಥಾಪನೆ ಮಾಡುವದು ನಮ್ಮ ಗುರಿ” ಎಂದಿದ್ದಾರೆ.
ಈ ಸಂದರ್ಭದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.